ಎಮ್ಮೆ ಕಳ್ಳತನದ ಶಂಕೆ: 20 ವರ್ಷದ ಯುವಕನ ಮೇಲೆ ಸಾಮೂಹಿಕ ಹಲ್ಲೆ! 
ದೇಶ

ಎಮ್ಮೆ ಕಳ್ಳತನದ ಶಂಕೆ: 20 ವರ್ಷದ ಯುವಕನ ಮೇಲೆ ಸಾಮೂಹಿಕ ಹಲ್ಲೆ; ಹತ್ಯೆ

ದುಬೈ ನಿಂದ ಮನೆಗೆ ಬಂದಿದ್ದ 20 ವರ್ಷದ ಯುವಕನನ್ನು ಗ್ರಾಮಸ್ಥರು ಹಿಡಿದು ಹಿಗ್ಗಾ-ಮುಗ್ಗಾ ಥಳಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ನಡೆದಿದೆ.

ಬರೇಲಿ: ದುಬೈ ನಿಂದ ಮನೆಗೆ ಬಂದಿದ್ದ 20 ವರ್ಷದ ಯುವಕನನ್ನು ಗ್ರಾಮಸ್ಥರು ಹಿಡಿದು ಹಿಗ್ಗಾ-ಮುಗ್ಗಾ ಥಳಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ನಡೆದಿದೆ.
ಶಾರೂಖ್, 20 ಹಲ್ಲೆಗೊಳಗಿ ಮೃತಪಟ್ಟ ವ್ಯಕ್ತಿಯಾಗಿದ್ದು, ಪ್ರಕರಣದ ಸಂಬಂಧ ನಾಲ್ವರನ್ನು ಕಂಟೋನ್ಮೆಂಟ್ ಪೊಲೀಸರು ಬಂಧಿಸಿದ್ದಾರೆ. ಶಾರೂಖ್ ಜೊತೆಗೆ 3 ಯುವಕರು ಆ.29 ರಂದು ರಾತ್ರಿ ಅಡ್ಡಾಡಲು ಹೋಗಿದ್ದರು. ಇವರು ಎಮ್ಮೆ ಕದ್ದಿದ್ದಾರೆ ಎಂದು ಭಾವಿಸಿದ ಗ್ರಾಮಸ್ಥರು ಶಾರೂಖ್ ನನ್ನು ಹಿಡಿದು ಥಳಿಸಿದ್ದಾರೆ.  ಆದರೆ ಆತನ ಸಹಚರರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ತೀವ್ರವಾಗಿ ಗಾಯಗೊಂಡಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆತ ಬದುಕುಳಿಯಲಿಲ್ಲ, ದುಬೈ ನಲ್ಲಿ ಟೈಲರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಶಾರೂಖ್ ಇತ್ತೀಚೆಗಷ್ಟೇ ಮನೆಗೆ ವಾಪಸ್ಸಾಗಿದ್ದ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT