ದೇಶ

ಮತ್ತೆ ಪಕ್ಷಕ್ಕೆ ಸೇರಿಸಿಕೊಂಡರೆ ಸ್ಟಾಲಿನ್ ನಾಯಕತ್ವ ಒಪ್ಪಿಕೊಳ್ಳಲು ಸಿದ್ಧ: ಅಳಗಿರಿ

Lingaraj Badiger
ಮದುರೈ: ನನ್ನನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಂಡರೆ ಡಿಎಂ ಅಧ್ಯಕ್ಷ ಹಾಗೂ ತಮ್ಮ ಕಿರಿಯ ಸಹೋದರ ಎಂ.ಕೆ.ಸ್ಟಾಲಿನ್ ಅವರ ನಾಯಕತ್ವವನ್ನು ಒಪ್ಪಿಕೊಳ್ಳಲು ಸಿದ್ಧ ಎಂದು ಉಚ್ಚಾಟಿತ ಡಿಎಂಕೆ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಎಂ.ಕೆ.ಅಳಗಿರಿ ಅವರು ಗುರುವಾರ ಹೇಳಿದ್ದಾರೆ.
ತಮ್ಮ ಮನೆ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅಳಗಿರಿ, ಮತ್ತೆ ಪಕ್ಷಕ್ಕೆ ಸೇರಿಸಿಕೊಂಡರೆ ಸ್ಟಾಲಿನ್ ನನ್ನ ನಾಯಕ ಎಂದು ಒಪ್ಪಿಕೊಳ್ಳಲು ಸಿದ್ಧ ಎಂದರು.
ಇದೇ ವೇಳೆ, ಕೇವಲ ಸಾಮಾನ್ಯ ಸಭೆಯೇ ಪಕ್ಷ ಅಲ್ಲ ಎಂಬುದನ್ನು ಡಿಎಂಕೆ ನಾಯಕರು ಅರ್ಥಮಾಡಿಕೊಳ್ಳಬೇಕು ಎಂದು ಅಳಗಿರಿ ಹೇಳಿದರು.
2014ರಲ್ಲಿ ಕರುಣಾನಿಧಿ ಅವರು ಡಿಎಂಕೆ ಅಧ್ಯಕ್ಷರಾಗಿದ್ದಾಗ ಅಳಗಿರಿಯನ್ನು ಪಕ್ಷದಿಂದ ಉಚ್ಚಾಟಿಸಲಾಗಿತ್ತು. ಕರುಣಾನಿಧಿ ನಿಧನದ ನಂತರ ಅವರ ಕಿರಿಯ ಪುತ್ರ ಸ್ಟಾಲಿನ್ ಡಿಎಂಕೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಅಳಗಿರಿ ಇತ್ತೀಚಿಗಷ್ಟೇ ನನ್ನನ್ನು ಮತ್ತೆ ಪಕ್ಷಕ್ಕೆ ಸೇರ್ಪಡೆಮಾಡಿಕೊಳ್ಳದಿದ್ದರೆ ಪರಿಣಾಮ ಎದುರಿಸಬೇಕಾದಿತು ಎಂದು ಎಚ್ಚರಿಕೆ ನೀಡಿದ್ದರು.
SCROLL FOR NEXT