ಎಫ್ ಐಆರ್ ದಾಖಲಿಸಲು ಪೊಲೀಸರು ನಕಾರ :ಅತ್ಯಾಚಾರ ಸಂತ್ರಸ್ತೆ ಬೆಂಕಿ ಹಂಚಿಕೊಂಡು ಆತ್ಮಹತ್ಯೆ
ಪೊಲೀಸರು ಎಫ್ ಐ ಆರ್ ದಾಖಲಿಸಲು ನಿರಾಕರಿಸಿದ ಹಿನ್ನೆಲೆಯಲ್ಲಿ ಅತ್ಯಾಚಾರಕ್ಕೊಳಗಾಗಿದ್ದ 28 ವರ್ಷದ ಸಂತ್ರಸ್ತೆಯೊಬ್ಬರು ಬೆಂಕಿ ಹಚ್ಚಿಕೊಂಡು ಸಾವನ್ನಪಿರುವ ಘಟನೆ ಉತ್ತರ ಪ್ರದೇಶದ ಶಹಜಾನ್ ಪುರದಲ್ಲಿ ನಡೆದಿದೆ.
ಶಹಜಾನ್ ಪುರ : ಪೊಲೀಸರು ಎಫ್ ಐ ಆರ್ ದಾಖಲಿಸಲು ನಿರಾಕರಿಸಿದ ಹಿನ್ನೆಲೆಯಲ್ಲಿ ಅತ್ಯಾಚಾರಕ್ಕೊಳಗಾಗಿದ್ದ 28 ವರ್ಷದ ಸಂತ್ರಸ್ತೆಯೊಬ್ಬರು ಬೆಂಕಿ ಹಚ್ಚಿಕೊಂಡು ಸಾವನ್ನಪಿರುವ ಘಟನೆ ಉತ್ತರ ಪ್ರದೇಶದ ಶಹಜಾನ್ ಪುರದಲ್ಲಿ ನಡೆದಿದೆ.
ಈ ಪ್ರಕರಣದ ನಂತರ ಮೂವರು ಪೊಲೀಸರನ್ನು ಸೇವೆಯಿಂದ ಅಮಾನತ್ತು ಮಾಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಪ್ರಕರಣ ದಾಖಲಿಸಿಕೊಳ್ಳಲು ನಿರಾಕರಿಸಿದ ಪೊಲೀಸರು, ಆರೋಪಿ ವಿನಯ್ ಕುಮಾರ್ ನೊಂದಿಗೆ ರಾಜೀ ಮಾಡಿಕೊಳ್ಳುವಂತೆ ಒತ್ತಡ ಹಾಕಿದ್ದರು. ಇದರಿಂದ ಬೇಸತ್ತು ತಮ್ಮ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಂತ್ರಸ್ತೆ ಪತಿ ರಾಮ್ ವಿರ್ ಆರೋಪಿಸಿದ್ದಾರೆ.
ಬೆಂಕಿಯಿಂದಾಗಿ ಗಂಭೀರವಾಗಿ ಗಾಯಗೊಂಡಿದ್ದ ಸಂತ್ರಸ್ತೆಯನ್ನು ಜಿಲ್ಲಾ ಆಸ್ಪತ್ರೆಗೆ ನಿನ್ನೆ ದಿನ ದಾಖಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿಯ ವಿರುದ್ಧ ಅತ್ಯಾಚಾರ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ಆರೋಪದಡಿಯಲ್ಲಿ ಆಕೆಯ ಪತಿ ದೂರು ದಾಖಲಿಸಿದ್ದಾರೆ.
ಈ ಮಧ್ಯೆ ಠಾಣೆಯ ಉಸ್ತುವಾರಿ ಸುಬಾಷ್ ಕುಮಾರ್, ಸಬ್ ಇನ್ಸ್ ಪೆಕ್ಟರ್ ಲಾಲ್ ಸಿಂಗ್ ರಾಣಾ ಮತ್ತು ಲೋಕೇಶ್ ಕುಮಾರ್ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಎಸ್. ಎನ್. ಚಿನ್ನಪ್ಪ ತಿಳಿಸಿದ್ದಾರೆ.
ಆರೋಪಿ ವಿನಯ್ ಕುಮಾರ್ ಅವರನ್ನು ಕೂಡಾ ಬಂಧಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟ ಎಲ್ಲರನ್ನೂ ಕಠಿಣ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಚಿನ್ನಪ್ಪ ಹೇಳಿದ್ದಾರೆ.