ಅಸ್ಸಾಂ ಇಂಟರ್ ಸಿಟಿ ರೈಲಿನಲ್ಲಿ ಸ್ಫೋಟ: 11 ಜನರಿಗೆ ಗಾಯ
ಅಸ್ಸಾಂ ಇಂಟರ್ ಸಿಟಿ ರೈಲಿನಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಕನಿಷ್ಛ 11 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.
ಗುವಾಹತಿ: ಅಸ್ಸಾಂ ಇಂಟರ್ ಸಿಟಿ ರೈಲಿನಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಕನಿಷ್ಛ 11 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.
ಅಸ್ಸಾಂನ ಉದಲಗುರಿ ಜಿಲ್ಲೆಯಲ್ಲಿ ಕಾಮಕ್ಯ-ದೇಕರ್ಗಾವ್ ಇಂಟರ್ಸಿಟಿ ಎಕ್ಸ್ಪ್ರೆಸ್ನಲ್ಲಿ ಈ ಸ್ಫೋಟ ಸಂಭವಿಸಿದ್ದು, ಅವಘಡದಲ್ಲಿ 11 ಜನರು ಗಾಯಗೊಂಡಿದ್ದಾರೆ. ಶನಿವಾರ ಸಂಜೆ 6.45ರ ಸುಮಾರಿಗೆ ಚಲಿಸುತ್ತಿದ್ದ ರೈಲಿನ ಬೋಗಿಯೊಂದರಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟ ಸಂಭವಿಸಿದ ಸ್ಥಳದ ರಾಜಧಾನಿ ಗುವಾಹತಿಯಿಂದ ಸುಮಾರು 95 ಕಿ.ಮೀ. ದೂರದಲ್ಲಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಟ್ರತ್ರೆಗೆ ದಾಖಲಿಸಲಾಗಿದೆ. ಓರ್ವ ಪ್ರಯಾಣಿಕನಿಗೆ ಗಂಭೀರವಾದ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ರೈಲ್ವೆ ಪೊಲೀಸರು ಮತ್ತು ಸ್ಥಳೀಯ ಪೊಲೀಸರು ತೆರಳಿದ್ದು, ಸ್ಫೋಟ ಹೇಗೆ ಸಂಭವಿಸಿದೆ ಎಂದು ತನಿಖೆ ನಡೆಸುತ್ತಿದ್ದಾರೆ. ಬಾಂಬ್ ಸ್ಫೋಟ ಅಥವಾ ಶಾರ್ಟ್ ಸರ್ಕ್ಯೂಟ್ನಿಂದ ಸ್ಫೋಟ ಸಂಭವಿಸಿದೆಯೇ ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ವಾಯುವ್ಯ ರೈಲ್ವೆಯ ಪಿಆರ್ಒ ನ್ರಿಪಿನ್ ಭಟ್ಟಾಚಾರ್ಯ ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.