ದೇಶ

ಮರಾಠ, ಭೀಮಾ ಕೋರೆಗಾಂವ್ ಹಿಂಸಾಚಾರದ ವೇಳೆ ದಾಖಲಾದ ಪ್ರಕರಣಗಳನ್ನು ಹಿಂಪಡೆಯಲಿದೆ ಮಹಾ ಸರ್ಕಾರ

Lingaraj Badiger
ಮುಂಬೈ: ಕಳೆದ ಜನವರಿಯಲ್ಲಿ ಭೀಮಾ ಕೋರೆಗಾಂವ್ ಹಿಂಸಾಚಾ ಖಂಡಿಸಿ ನಡೆದ ಬಂದ್ ವೇಳೆ ಹಾಗೂ ಇತ್ತೀಚಿನ ಮರಾಠ ಮೀಸಲಾತಿ ಹೋರಾಟದ ವೇಳೆ ದಾಖಲಾದ ಪ್ರಕರಣಗಳನ್ನು ಹಿಂಪಡೆಯುವುದಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಶನಿವಾರ ತಿಳಿಸಿದ್ದಾರೆ.
ಆದಾಗ್ಯೂ, ಗಂಭೀರ ಅಪರಾಧ ಪ್ರಕರಣಗಳನ್ನು ಹಿಂಪಡೆಯುವುದಿಲ್ಲ ಎಂದು ಮಹಾರಾಷ್ಟ್ರ ಸಿಎಂ ಸ್ಪಷ್ಟಪಡಿಸಿದ್ದಾರೆ.
ಮರಾಠ ಮೀಸಲಾತಿ ಹೋರಾಟದ ವೇಳೆ ಒಟ್ಟು 543 ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 46 ಪ್ರಕರಗಳು ಗಂಭೀರ ಸ್ವರೂಪದ್ದಾಗಿವೆ. ಇನ್ನು 314 ಪ್ರಕರಗಳು ತನಿಖಾ ಹಂತದಲ್ಲಿವೆ.
ಭೀಮಾ ಕೋರೆಗಾಂವ್ ಹಿಂಸಾಚಾರದ ವೇಳೆ 655 ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 63 ಗಂಭೀರ ಪ್ರಕರಣಗಳಾಗಿವೆ. 158 ಪ್ರಕರಣಗಳ ತನಿಖೆ ಪ್ರಗತಿಯಲ್ಲಿದ್ದು, 275 ಪ್ರಕರಣಗಳನ್ನು ಹಿಂಪಡೆಯಲು ಶಿಫಾರಸು ಮಾಡಲಾಗಿದೆ.
SCROLL FOR NEXT