ನವಜೋತ್ ಸಿಂಗ್ ಸಿಧು 
ದೇಶ

ಪಂಜಾಬ್ ಸಿಎಂ ತಮ್ಮ ಸಂಪುಟದಿಂದ ಸಿಧುರನ್ನು ಕಿತ್ತೊಗೆಯಬೇಕು; ಬಿಜೆಪಿ

ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರು ಸಚಿವ ನವಜೋತ್ ಸಿಂಗ್ ಸಿಧುರನ್ನು ತಮ್ಮ ಸಂಪುಟದಿಂದ ಕಿತ್ತೊಗೆಯಬೇಕು ಎಂದು ಬಿಜೆಪಿ ಭಾನುವಾರ ಹೇಳಿದೆ...

ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರು ಸಚಿವ ನವಜೋತ್ ಸಿಂಗ್ ಸಿಧುರನ್ನು ತಮ್ಮ ಸಂಪುಟದಿಂದ ಕಿತ್ತೊಗೆಯಬೇಕು ಎಂದು ಬಿಜೆಪಿ ಭಾನುವಾರ ಹೇಳಿದೆ. 
ಈ ಕುರಿತಂತೆ ಮಾತನಾಡಿರುವ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ತರುಣ್ ಚುಗ್ ಅವರು, ಸ್ವಂತ ಅಮರೀಂದರ್ ಸಿಂಗ್ ಅವರೇ ಸಿಧುರನ್ನು ವಿರೋಧಿಸಿದ್ದಾರೆ. ಸಿಧು ಅವರು ಜೈಪುರದಲ್ಲಿ ಮಾಧ್ಯಮಗಳೊಂದಿಗೆ ಕೆಟ್ಟದಾಗಿ ವರ್ತಿಸಿದ್ದು, ಅವರ ವರ್ತನೆ ದುರಾದೃಷ್ಟಕರ ಹಾಗೂ ಖಂಡನೀಯವಾದದ್ದು ಎಂದು ಹೇಳಿದ್ದಾರೆ. 
ಪಾಕಿಸ್ತಾನದ ಪತ್ರಕರ್ತನ್ನು ಸಿಧು ಅಪ್ಪಿಕೊಳ್ಳುತ್ತಾರೆ. ಆದರೆ, ಭಾರತದ ಪತ್ರಕರ್ತರೊಂದಿಗೆ ಕೆಟ್ಟದಾಗಿ ವರ್ತಿಸುತ್ತಾರೆ. 2019 ಸಂಸತ್ ಚುನಾವಣೆ ವೇಳೆಗೆ ಮುಸ್ಲಿಮರ ಮತಪಡೆಯಲು ಸಿಧು ಅವರು, ರಾಹುಲ್ ಅವರ ಮಾರ್ಗವನ್ನೇ ಅನುಸರಿಸುತ್ತಾರೆಂದು ತಿಳಿಸಿದ್ದಾರೆ. 
ಕೇಂದ್ರದಲ್ಲಿ ಯಶಸ್ವಿಯಾಗಿ ಸರ್ಕಾರ ನಡೆಸಿದ್ದ ಕಾಂಗ್ರೆಸ್ ಗಡಿಯಲ್ಲಿ ಕರ್ತಾರ್ಪುರ ಕಾರಿಡಾರ್ ನಿರ್ಮಿಸುವಲ್ಲಿ ವಿಫಲವಾಗಿತ್ತು. ಆದರೆ, ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಆ ಕಾರ್ಯವನ್ನು ಯಶಸ್ವಿಯಾಗಿ ಮಾಡುತ್ತಿದೆ ಎಂದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!