ಶೋಪಿಯಾನ್: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರರು ದಾಳಿ ನಡೆಸಿದ್ದು, ಸ್ಥಳದಲ್ಲಿ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ಭಾರೀ ಗುಂಡಿನ ಕಾಳಗ ನಡೆಯುತ್ತಿದೆ ಎಂದು ಸೋಮವಾರ ತಿಳಿದುಬಂದಿದೆ.
ಶೋಪಿಯಾನ್ ಜಿಲ್ಲೆಯ ಸಂಗ್ರನ್ ಎಂಬ ಗ್ರಾಮದಲ್ಲಿ 2-3 ಉಗ್ರರು ಅಡಗಿ ಕುಳಿತಿದ್ದು, ಉಗ್ರರ ವಿರುದ್ಧ ಭದ್ರತಾ ಪಡೆಗಳು ಭಾರೀ ಕಾರ್ಯಾಚರಣೆ ನಡೆಸುತ್ತಿವೆ.
ಕಳೆದ ವಾರವಷ್ಟೇ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ ಖ್ರೂ ಎಂಬ ಪ್ರದೇಶದಲ್ಲಿ ಎನ್'ಕೌಂಟರ್ ನಡೆಸಿದ್ದ ಭದ್ರತಾಪಡೆಗಳು ಇಬ್ಬರು ಉಗ್ರರನ್ನು ಹೊಡೆದುರುಳಿಸಿತ್ತು. ಈ ವೇಳೆ ಹತ್ಯೆಯಾದ ಉಗ್ರರಿಂದ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು ಹಾಗೂ ಸ್ಫೋಟ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿತ್ತು.
ಇದರ ಬೆನ್ನಲ್ಲೇ ಇದೀಗ ಮತ್ತೆ ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರರು ಪ್ರತ್ಯಕ್ಷರಾಗಿದ್ದು, ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿವೆ ಎಂದು ವರದಿಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics