ಅಮೃತಸರ: ಮಾದಕ ವಸ್ತು ಮಾರಾಟ ಹಿನ್ನಲೆಯಲ್ಲಿ ಬಂಧನಕ್ಕೊಳಗಾಗಿದ್ದ ವ್ಯಕ್ತಿಯೊಬ್ಬ ಪೊಲೀಸ್ ಕಸ್ಟಡಿಯಲ್ಲಿಯೇ ಸಾವನ್ನಪ್ಪಿರುವ ಘಟನೆ ಪಂಜಾಬ್ ರಾಜ್ಯದ ಅಮೃತಸರದಲ್ಲಿ ನಡೆದಿದೆ.
ಬಿಟ್ಟು ಶಾಹ್ ಸಾವನ್ನಪ್ಪಿದ ವ್ಯಕ್ತಿಯಾಗಿದ್ದಾನೆ. ವ್ಯಕ್ತಿಯ ಸಾವಿಗೆ ಇದೀಗ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ.
ಸಾವಿಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕುಟುಂಬಸ್ಥರು, ಪೊಲೀಸ್ ಠಾಣೆ ಮೇಲೆ ಕಳೆದ ರಾತ್ರಿ ದಾಳಿ ನಡೆಸಿದ್ದಾರೆ. ಈ ವೇಳೆ ಪೊಲೀಸ್ ಸಿಬ್ಬಂದಿ ಹಾಗೂ ಸ್ಥಳೀಯರ ನಡುವೆ ಮಾತಿನ ಚಕಮಕಿಗಳೂ ಕೂಡ ನಡೆದಿವೆ. ಘಟನೆಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಗಳು ಗಾಯಗೊಂಡಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಕರಣ ಸಂಬಂಧ ಈಗಾಗಲೇ ತನಿಖೆ ಆರಂಬವಾಗಿದೆ. ವೈದ್ಯಕೀಯ ಮಂಡಳಿ ಮರಣೋತ್ತರ ಪರೀಕ್ಷೆ ನಡೆಸಲಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಸ್'ಪಿ ಜೆ.ಎಸ್.ವಾಲಿಯಾ ಅವರು ಹೇಳಿದ್ದಾರೆ.