ದೇಶ

ಬಜರಂಗದಳ ಕಾರ್ಯಕರ್ತರು ಗುಂಡು ಹಾರಿಸಿಲ್ಲ, ಪೊಲೀಸ್ ಗುಂಡೇಟಿನಿಂದ ಅಧಿಕಾರಿ ಸಾವು: ಬಿಜೆಪಿ ಶಾಸಕ

Lingaraj Badiger
ಲಖನೌ: ಬುಲಂದ್ ಶಹರ ಹಿಂಸಾಚಾರದ ವೇಳೆ ಪೊಲೀಸರು ನಡೆಸಿದ ಗುಂಡಿನ ದಾಳಿಯಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಮೃತಪಟ್ಟಿದ್ದಾರೆ. ಇದರಲ್ಲಿ ಬಜರಂಗ ದಳದ ಕಾರ್ಯಕರ್ತರ ಪಾತ್ರ ಇಲ್ಲ ಎಂದು ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಅವರು ಮಂಗಳವಾರ ಹೇಳಿದ್ದಾರೆ.
ಘಟನೆ ನಡೆದಿರುವುದು ದುರದೃಷ್ಟಕರ ಎಂದಿರುವ ರೋಹನಿಯಾ ಶಾಸಕ ಸುರೇಂದ್ರ ಸಿಂಗ್ ಅವರು, ಪೊಲೀಸರು ಸಹ ಉದ್ದೇಶಪೂರ್ವಕವಾಗಿ ಅಧಿಕಾರಿಯನ್ನು ಹತ್ಯೆ ಮಾಡಿಲ್ಲ ಎಂದಿದ್ದಾರೆ.
ಪೊಲೀಸರ ಗುಂಡೇಟಿನಿಂದ ಇನ್ಸ್ ಪೆಕ್ಟರ್ ಸುಬೋಧ್ ಕುಮಾರ್ ಸಿಂಗ್ ಅವರು ಮೃತಪಟ್ಟಿರುವ ಶಂಕೆ ಇದೆ. ಬಜರಂಗ ದಳದ ಕಾರ್ಯಕರ್ತರು ಕೇವಲ ಇಟ್ಟಿಗೆ ಎಸೆದಿದ್ದಾರೆ. ಆದರೆ ಅವರು ಗುಂಡು ಹಾರಿಸಿಲ್ಲ ಎಂದು ಬಿಜೆಪಿ ಶಾಸಕರು ತಿಳಿಸಿದ್ದಾರೆ.
ಈ ಮಧ್ಯೆ, ಪೊಲೀಸರು ಬಜರಂಗದಳ ಬುಲಂದ್ ಶಹರ ಜಿಲ್ಲಾ ಸಂಚಾಲಕ ಯೋಗೇಶ್ ರಾಜ್ ಈ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ ಎಂದು ಗುರುತಿಸಿದ್ದು, ಆತನಕ್ಕೆ ಬಲೆ ಬೀಸಿದ್ದಾರೆ.
ಅಕ್ರಮ ಕಸಾಯಿ ಖಾನೆಗಳ ವಿರುದ್ಧ ಸೋಮವಾರ ನಡೆಯುತ್ತಿದ್ದ ಪ್ರತಿಭಟನೆಯೇ ಹಿಂಸಾಚಾರಕ್ಕೆ ತಿರುಗಿತ್ತು. ಈ ಸಂದರ್ಭದಲ್ಲಿ ಹಿಂದು ಮತ್ತು ಮುಸ್ಲಿಂ ಸಮುದಾಯದ ನಡುವೆ ಆರಂಭವಾದ ಕೋಮು ಸಂಘರ್ಷವನ್ನು ತಡೆಯಲು ಮುಂದಾದ ಸುಬೋಧ್ ಕುಮಾರ್ ಸಿಂಗ್ ದುಷ್ಕರ್ಮಿಗಳ ಗುಂಡಿಗೆ ಬಲಿಯಾಗಿದ್ದಾರೆ.
SCROLL FOR NEXT