ಅಭಿಶೇಕ್ ಕುಮಾರ್ 
ದೇಶ

ನನ್ನ ತಂದೆ ನಮಗೆ ಜಾತ್ಯತೀತತೆ ಬಗ್ಗೆ ಹೇಳಿಕೊಟ್ಟಿದ್ದರು: ಹತ್ಯೆಯಾದ ಪೊಲೀಸ್ ಅಧಿಕಾರಿಯ ಪುತ್ರ

ತನ್ನ ಮಕ್ಕಳು ಎಲ್ಲಾ ಧರ್ಮಗಳನ್ನು ಗೌರವಿಸಬೇಕು ಎಂದು ನನ್ನ ತಂದೆ ಬಯಸುತ್ತಿದ್ದರು ಎಂದು ನಿನ್ನೆ ಉತ್ತರ ಪ್ರದೇಶದ....

ಬುಲಂದ್ ಶಹರ್: ತನ್ನ ಮಕ್ಕಳು ಎಲ್ಲಾ ಧರ್ಮಗಳನ್ನು ಗೌರವಿಸಬೇಕು ಎಂದು ನನ್ನ ತಂದೆ ಬಯಸುತ್ತಿದ್ದರು ಎಂದು ನಿನ್ನೆ ಉತ್ತರ ಪ್ರದೇಶದ ಬುಲಂದ್ ಶಹರ್ ನಲ್ಲಿ ನಡೆದ ಹಿಂಸಾಚಾರದಲ್ಲಿ ಮೃತಪಟ್ಟ ಪೊಲೀಸ್ ಅಧಿಕಾರಿಯ ಸುಬೋಧ್ ಕುಮಾರ್ ಅವರ ಪುತ್ರ ಅಭಿಶೇಕ್ ಕುಮಾರ್ ಅವರು ಹೇಳಿದ್ದಾರೆ.
ನಾವು ದೇಶದ ಒಬ್ಬ ಉತ್ತಮ ನಾಗರಿಕರಾಗಬೇಕು. ಧರ್ಮದ ಹೆಸರಿನಲ್ಲಿ ಹಿಂಸಾಚಾರಕ್ಕೆ ಪ್ರಚೋದನೆ ನೀಡಬಾರದು. ಅದು ಹಿಂದೂ, ಮುಸ್ಲಿಮ್, ಸಿಖ್ ಯಾರೇ ಅಗಲಿ. ಇಲ್ಲ ಎಲ್ಲರೂ ಸಮಾನರು. ಧರ್ಮದ ಹೆಸರಿನಲ್ಲಿ ಹಿಂಸೆ ನಡೆಯುವುದನ್ನು ನಮ್ಮ ತಂದೆ ಎಂದಿಗೂ ವಿರೋಧಿಸುತ್ತಿದ್ದರು. ಆದರೆ ಇಂದು ನನ್ನ ತಂದೆ ಹಿಂದು-ಮುಸ್ಲಿಂ ಸಂಘರ್ಷದಿಂದ ನಡೆದ ಹಿಂಸೆಯಲ್ಲಿ ಮೃತರಾಗಿದ್ದಾರೆ. ನಾಳೆ ಇನ್ಯಾರ ತಂದೆ ಮೃತರಾಗುತ್ತಾರೋ...? ಎಂದಿದ್ದಾರೆ ಅಭಿಶೇಕ್.
ನಮ್ಮ ತಂದೆ ಒಬ್ಬ ಅತ್ಯುತ್ತಮ ನಾಗರಿಕರಾಗಿದ್ದರು. ಅವರಿಗೆ ಸಮಾಜದಲ್ಲಿ ಹಿಂಸೆ ನಡೆಯುವುದು ಎಂದಿಗೂ ಇಷ್ಟವಿರಲಿಲ್ಲ. ಆದರೆ ಆ ಹಿಂಸೆಯಿಂದಲೇ ಅವರು ಮೃತರಾಗಿದ್ದು ದುರದೃಷ್ಟಕರ. ಇಂಥ ಹಿಂಸೆಗಳಿಗೆ ಕೊನೆ ಎಂದು? ಇಂದು ನನ್ನ ತಂದೆ ಮೃತರಾದರು, ನಾಳೆ ಯಾರ ತಂದೆಯೋ?" ಎಂದು ಅಭಿಷೇಕ್ ಭಾವುಕರಾಗಿ ಹೇಳಿದರು.
ಅಭಿಶೇಕ್ ಕುಮಾರ್ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿದ್ದು, ತಂದೆ ಸಾಯುವ ಒಂದು ದಿನದ ಹಿಂದೆ, ವೀಕ್ ಇರುವ ವಿಷಗಳ ಕಡೆ ಹೆಚ್ಚು ಗಮನ ಕೊಡು ಎಂದು ಹೇಳಿದ್ದರು ಎಂದರು.
ಅಕ್ರಮ ಕಸಾಯಿ ಖಾನೆಗಳ ವಿರುದ್ಧ ಸೋಮವಾರ ನಡೆಯುತ್ತಿದ್ದ ಪ್ರತಿಭಟನೆಯೇ ಹಿಂಸಾಚಾರಕ್ಕೆ ತಿರುಗಿತ್ತು. ಈ ಸಂದರ್ಭದಲ್ಲಿ ಹಿಂದು ಮತ್ತು ಮುಸ್ಲಿಂ ಸಮುದಾಯದ ನಡುವೆ ಆರಂಭವಾದ ಕೋಮು ಸಂಘರ್ಷವನ್ನು ತಡೆಯಲು ಮುಂದಾದ ಸುಬೋಧ್ ಕುಮಾರ್ ಸಿಂಗ್ ಅವರ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ