ನವದೆಹಲಿ: ಉತ್ತರಪ್ರದೇಶದ ಬುಲಂದಶಹರ್ ನಲ್ಲಿ ನಡೆದ ಹಿಂಸಾಚಾರ ಕಾಂಗ್ರೆಸ್ ಪಕ್ಷದ ಕೈವಾಡ ಇರಬಹುದು ಎಂದು ಬಿಜಿಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದಾರೆ.
ಕೆಲವು ದುಷ್ಕರ್ಮಿಗಳಿಂದ ಈ ಕೃತ್ಯ ನಡೆದಿದೆ, ಉತ್ತರ ಪ್ರದೇಶದಲ್ಲಿರುವ ಯೋಗಿ ಆದಿತ್ಯನಾಥ್ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನಿಸುತ್ತಿರುವವರನ್ನು ನಾವು ಸುಮ್ಮನೆ ಬಿಡುವುದಿಲ್ಲ ಎಂದು ಸ್ವಾಮಿ ಎಚ್ಚರಿಕೆ ನೀಡಿದ್ದಾರೆ.
ಉತ್ತರ ಪ್ರದೇಶ ಹೊತ್ತಿ ಉರಿಯುತ್ತಿದೆ, ಆದರೆ ಯೋಗಿ ಆದಿತ್ಯ ನಾಥ್ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ ಎಂಬ ಕಾಂಗ್ರೆಸ್ ಆರೋಪಕ್ಕೆ ತಿರುಗೇಟು ನೀಡಿದ ಸ್ವಾಮಿ, 1984 ರಲ್ಲಿ ಸಿಖ್ ವಿರೋಧಿ ದಂಗೆಯಲ್ಲಿ ಇಡಿ ಭಾರತ ಹೊತ್ತಿ ಉರಿಯಲಿಲ್ಲವೇ ಎಂದು ಪ್ರಶ್ನಿಸಿದ್ದಾರೆ, ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಸಾವಿರಾರು ಮುಗ್ದ ಜನರನ್ನು ವಿಚಾರಣೆ ನಡೆಸದೆ ಜೈಲಿಗೆ ಹಾಕಲಿಲ್ಲವೇ ಎಂದು ಕೇಳಿದ್ದಾರೆ.