ಬಾಬ್ರಿ ಮಸೀದಿ 
ದೇಶ

ಡಿಸೆಂಬರ್ 6: ಬಾಬ್ರಿ ಮಸೀದಿ ಧ್ವಂಸ, ವಿಹೆಚ್ ಪಿಯಿಂದ 'ಶೌರ್ಯ ದಿವಸ್' ಆಚರಣೆ ಸಾಧ್ಯತೆ?

ಅಯೋಧ್ಯೆಯಲ್ಲಿನ ಬಾಬ್ರಿ ಮಸೀದಿ ಧ್ವಂಸ ವರ್ಷಾಚರಣೆ ಅಂಗವಾಗಿ ಡಿಸೆಂಬರ್ 6ನ್ನು ಶೌರ್ಯ ದಿವಸವನ್ನಾಗಿ ಆಚರಿಸಲು ವಿಶ್ವ ಹಿಂದೂ ಪರಿಷತ್ ಚಿಂತನೆ ನಡೆಸಿದೆ

ನವದೆಹಲಿ: ಅಯೋಧ್ಯೆಯಲ್ಲಿನ ಬಾಬ್ರಿ ಮಸೀದಿ ಧ್ವಂಸ ವರ್ಷಾಚರಣೆ ಅಂಗವಾಗಿ  ಡಿಸೆಂಬರ್ 6ನ್ನು ಶೌರ್ಯ ದಿವಸವನ್ನಾಗಿ ಆಚರಿಸಲು ವಿಶ್ವ ಹಿಂದೂ ಪರಿಷತ್  ಚಿಂತನೆ ನಡೆಸಿದೆ. ರಾಮಮಂದಿರ ನಿರ್ಮಾಣಕ್ಕೆ ಬೆಂಬಲ ಸೂಚಕವಾಗಿ  ಡಿಸೆಂಬರ್ 18 ರಂದು ಗೀತಾ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ.

2019 ರ ಲೋಕಸಭಾ ಚುನಾವಣೆ ಹತ್ತಿರವಿರುವಂತೆ ಎಲ್ಲಾರ ಕಣ್ಣು  ರಾಮ ಮಂದಿರ ನಿರ್ಮಾಣದತ್ತ ನೆಟ್ಟಿದೆ.  ದೇವಾಲಯ ನಿರ್ಮಾಣಕ್ಕಾಗಿ ಬಾಬ್ರಿ ಮಸೀದಿ ಧ್ವಂಸಗೊಳಿಸಿದ್ದಕ್ಕೆ 26 ವರ್ಷ ಸಂದಿರುವ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಸೇರಿದಂತೆ ವಿವಿಧ ಹಿಂದೂಪರ ಸಂಘಟನೆಗಳು  ಶೌರ್ಯ ದಿವಸ್ ಆಗಿ ಆಚರಿಸುವ ಸಾಧ್ಯತೆ ಇದೆ.

ಅಯೋಧ್ಯೆಯಲ್ಲಿ ಶೌರ್ಯ ದಿವಸ್ ಕಾರ್ಯಕ್ರಮವಾಗಿ ಸಂಪ್ರದಾಯಿಕವಾಗಿ ಆಚರಿಸಲಾಗುವುದು, ವಿಶ್ವ ಹಿಂದೂ ಪರಿಷತ್ ಮತ್ತಿತರ ಸಂಘಟನೆಗಳಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು, ಸರಸ್ವತಿಗೆ ವಿಶೇಷವಾದ ಪೂಜೆ ಸಲ್ಲಿಸಲಾಗುವುದು ಎಂದು  ವಿಹೆಚ್ ಪಿ ವಕ್ತಾರ ಶರದ್ ಶರ್ಮಾ ಹೇಳಿದ್ದಾರೆ.
ದೆಹಲಿಯಲ್ಲಿ ಡಿಸೆಂಬರ್ 9 ರಂದು ಆಯೋಜಿಸಿರುವ ಮತ್ತೊಂದು ಧರ್ಮ ಸಭಾದಲ್ಲಿ ಸುಮಾರು ಐದು ಲಕ್ಷ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ವಿಶ್ವ ಹಿಂದೂ ಪರಿಷತ್  ಪದಾಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಮೊಜ್ತಾಬಾ ಖಮೇನಿ ಜೀವಂತವಾಗಿ ಇದ್ದಾರೋ ಅಥವಾ ಇಲ್ಲವೋ? ಆತಂಕದ ಹಳೆಯ Video ಬಿಡುಗಡೆ ಮಾಡಿದ ಇರಾನ್!