ರಾಕೇಶ್ ಅಸ್ತಾನ, ಅಲೋಕ್ ವರ್ಮಾ
ನವದೆಹಲಿ: ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಹಾಗೂ ಸಿಬಿಐ ವಿಶೇಷ ನಿರ್ದೇಶಕ ರಾಕೇಶ್ ಅಸ್ಥಾನ ಅವರು ಬೆಕ್ಕುಗಳ ತರಹ ಕಿತ್ತಾಡುವ ಮೂಲಕ ದೇಶದ ಅತ್ಯುನ್ನತ ತನಿಖಾ ಸಂಸ್ಥೆಯಲ್ಲಿ ಅಸಾಮಾನ್ಯ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕೇಂದ್ರ ಸರ್ಕಾರ ಬುಧವಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ.
ಕಡ್ಡಾಯ ರಜೆಯ ಮೇಲೆ ಕಳುಹಿಸಿರುವ ಕೇಂದ್ರ ಸರ್ಕಾರದ ನಿರ್ಧಾರ ಪ್ರಶ್ನಿಸಿ ಅಲೋಕ್ ವರ್ಮಾ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ತಮ್ಮ ವಾದ ಮಂಡಿಸಿದ ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್ ಅವರು, ಇಬ್ಬರು ಉನ್ನತ ಅಧಿಕಾರಿಗಳ ನಡುವಿನ ಜಗಳದಿಂದ ಸಿಬಿಐ ಗೌರವಕ್ಕೆ ಧಕ್ಕೆಯಾಗಿದೆ ಎಂದರು.
ಅಲೋಕ್ ವರ್ಮಾ ಹಾಗೂ ರಾಕೇಶ್ ಅಸ್ಥಾನ ನಡುವಿನ ಜಗಳದಿಂದ ಸಿಬಿಐ ಅಪಹಾಸ್ಯಕ್ಕೀಡಾಗಿದೆ. ತನಿಖಾ ಸಂಸ್ಥೆ ವಿಶ್ವಾಸ ಕಳೆದುಕೊಳ್ಳುವಂತಾಗಿದೆ ಎಂದು ವೇಣುಗೋಪಾಲ್ ಅವರು ಹೇಳಿದ್ದಾರೆ.
ಇಬ್ಬರು ಅಧಿಕಾರಿಗಳ ಆಂತರಿಕ ಭಿನ್ನಾಭಿಪ್ರಾಯಗಳನ್ನು ಸರ್ಕಾರ ಸೂಕ್ಷ್ಮವಾಗಿ ಗಮನಿಸಿದ ನಂತರ ಅವರನ್ನು ರಜೆಯ ಮೇಲೆ ಕಳುಹಿಸಲಾಗಿದೆ. ಅವರನ್ನು ವರ್ಗಾವಣೆ ಮಾಡಿಲ್ಲ ಎಂದು ಎಜಿ ಕೇಂದ್ರ ಸರ್ಕಾರದ ನಿರ್ಧಾವನ್ನು ಸಮರ್ಥಿಸಿಕೊಂಡರು.