ಸಂಕೇತ್ ಮೋಚನ್ ದೇವಾಲಯ 
ದೇಶ

ವಾರಣಾಸಿಯ ಸಂಕಟ ಮೋಚನ ದೇವಾಲಯಕ್ಕೆ ಬಾಂಬ್ ಬೆದರಿಕೆ

ವಾರಣಾಸಿಯ ಸಂಕಟ ಮೋಚನ ದೇವಾಲಯಕ್ಕೆ ಬಾಂಬ್ ಸ್ಫೋಟಿಸುವ ಬೆದರಿಕೆ ಹಾಕಲಾಗಿದ್ದು, ದೇವಸ್ಥಾನದ ಸುತ್ತಮುತ್ತ...

ವಾರಣಾಸಿ: ವಾರಣಾಸಿಯ ಸಂಕಟ ಮೋಚನ ದೇವಾಲಯಕ್ಕೆ ಬಾಂಬ್ ಸ್ಫೋಟಿಸುವ  ಬೆದರಿಕೆ ಹಾಕಲಾಗಿದ್ದು, ದೇವಸ್ಥಾನದ ಸುತ್ತಮುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ದೇವಸ್ಥಾನಕ್ಕೆ ಪತ್ರವೊಂದು ಬಂದಿದ್ದು, ಅದರಲ್ಲಿ ದೇವಾಲಯ ಆವರಣದಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ ಎಂದು ದೇವಾಲಯದ ಮುಖ್ಯ ಅರ್ಚಕ ವಿಶ್ವಂಭರ್ ನಾಥ್ ಮಿಶ್ರಾ ಅವರು ತಿಳಿಸಿದ್ದಾರೆ.
ನಮಗೆ ಬಾಂಬ್ ಬೆದರಿಕೆ ಪತ್ರ ಬಂದಿದ್ದು, ಈ ಹಿಂದಿನ ಸ್ಫೋಟಕ್ಕಿಂತಲೂ ಈ ಬಾರಿ ದೊಡ್ಡ ಪ್ರಮಾಣದ ಸ್ಫೋಟ ಸಂಭವಿಸಲಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ. ಈ ಕುರಿತು ನಾವು ಪೊಲೀಸರಿಗೆ ಮಾಹಿತಿ ನೀಡಿದ್ದೇವೆ. ಪೊಲೀಸರು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದು, ಪತ್ರದ ಕುರಿತು ತನಿಖೆ ನಡೆಸುತ್ತಿದ್ದಾರೆ ಎಂದು ಮಿಶ್ರಾ ಹೇಳಿದ್ದಾರೆ.
ಮಾರ್ಚ್ 7, 2006ರಲ್ಲಿ ಸಂಕಟ ಮೋಚನ ದೇವಾಲಯ ಬಳಿ ಹಾಗೂ ವಾರಣಾಸಿಯ ಕಾಂಟೋನ್ಮೆಂಟ್ ರೈಲ್ವೆ ನಿಲ್ದಾಣದ ಬಳಿ ಸರಣಿ ಬಾಂಬ್ ಸ್ಫೋಟ ಸಂಭವಿಸಿತ್ತು. ಸ್ಫೋಟದಲ್ಲಿ 21 ಮಂದಿ ಮೃತಪಟ್ಟಿದ್ದರು ಮತ್ತು ನೂರಾರು ಜನ ಗಾಯಗೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್

ಒಂದು ಕ್ಷಣದ ನಿರ್ಲಕ್ಷ್ಯ, ವಿಚಿತ್ರ ರನೌಟ್‌ಗೆ ತಿಲಕ್ ವರ್ಮಾ ಬಲಿ; ಗಂಭೀರ್ ಫುಲ್ ಗರಂ! ಆಗಿದ್ದೇನು? Video

3rd T20I: ಆಲೌಟ್ ನಲ್ಲೂ ವಿಚಿತ್ರ ದಾಖಲೆ ಬರೆದ ಟೀಂ ಇಂಡಿಯಾ!

"ಜಗತ್ತಿಗೆ ಅಗತ್ಯವಿರುವ ಪರಿಹಾರಗಳು ನಿಮ್ಮಲ್ಲಿವೆ": ಚೆನ್ನೈನಲ್ಲಿ 'Gen Z ಯನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತು