ರಾಹುಲ್ ಗಾಂಧಿ 
ದೇಶ

ನಿಮ್ಮನ್ನು ಹಿಂದುಳುವಂತೆ ಮಾಡಿರುವ ಭ್ರಷ್ಟಾಚಾರವನ್ನು ಕಾಂಗ್ರೆಸ್ ಕೊನೆಗೊಳಿಸುತ್ತದೆ: ವಿದ್ಯಾರ್ಥಿಗಳಿಗೆ ರಾಹುಲ್ ಗಾಂಧಿ

ಯುವ ಸಮೂಹವನ್ನು ಹಿಂದುಳಿಯುವಂತೆ ಮಾಡಿರುವ ಭ್ರಷ್ಟಾಚಾರವನ್ನು ಕೊನೆಗೊಳಿಸಲು ಕಾಂಗ್ರೆಸ್ ಎಲ್ಲಾ ರೀತಿಯಲ್ಲೂ ಪ್ರಯತ್ನ ಮಾಡಲಿದೆ ಎಂದು ರಾಹುಲ್ ಗಾಂಧಿ ವಿದ್ಯಾರ್ಥಿಗಳಿಗೆ ಭರವಸೆ ನೀಡಿದ್ದಾರೆ.

ನವದೆಹಲಿ: ಯುವ ಸಮೂಹವನ್ನು ಹಿಂದುಳಿಯುವಂತೆ ಮಾಡಿರುವ ಭ್ರಷ್ಟಾಚಾರವನ್ನು ಕೊನೆಗೊಳಿಸಲು ಕಾಂಗ್ರೆಸ್ ಎಲ್ಲಾ ರೀತಿಯಲ್ಲೂ ಪ್ರಯತ್ನ ಮಾಡಲಿದೆ ಎಂದು ರಾಹುಲ್ ಗಾಂಧಿ ವಿದ್ಯಾರ್ಥಿಗಳಿಗೆ ಭರವಸೆ ನೀಡಿದ್ದಾರೆ. 
ವಿದ್ಯಾರ್ಥಿಗಳನ್ನುದ್ದೇಶಿಸಿ ಬರೆದಿರುವ ರಾಹುಲ್ ಗಾಂಧಿ,  ದೇಶ ನಿರ್ಮಿಸುವವರು ಹಾಗೂ ದೇಶಗಳು ಇಂದು ಯುದ್ಧದ ಮೂಲಕ ಮುನ್ನಡೆಯುತ್ತಿಲ್ಲ, ಬದಲಾಗಿ ವಿಜ್ಞಾನ, ತಂತ್ರಜ್ಞಾನ ಕಲೆ, ಸಾಹಿತ್ಯದ ಮೂಲಕ ಮುನ್ನಡೆಯುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ರಾಹುಲ್ ಗಾಂಧಿ ಬರೆದಿರುವ ಪತ್ರವನ್ನು ಕಾಂಗ್ರೆಸ್ ನ ವಿದ್ಯಾರ್ಥಿ ಘಟಕ ಎನ್ಎಸ್ ಯುಐ ಬೆಹ್ತಾರ್ ಭಾರತ್ (ಬೆಟರ್ ಇಂಡಿಯಾ) ಅಭಿಯಾನದ ಮೂಲಕ ಎಲ್ಲಾ ಕಾಲೇಜುಗಳಲ್ಲಿ ಎಲ್ಲಾ ಭಾಷೆಗಳಲ್ಲಿ ಪ್ರಕಟಿಸಲಿದೆ,  
ವಿಚಾರಪರತೆ ಹಾಗೂ ನ್ಯಾಯವನ್ನು ಆಧರಿಸಿ ಎಲ್ಲಾ ಸಮಾಜಗಳು ಬೆಳವಣಿಗೆ ಸಾಧಿಸುತ್ತವೆ. ಆದರೆ ಭಾರತದಲ್ಲಿರುವ ವಿದ್ಯಾರ್ಥಿಗಳು ಈ ಬೆಳವಣಿಗೆಯ ಮುಂಚೂಣಿಯಲ್ಲಿದ್ದೀರಿ ಎಂದು ರಾಹುಲ್ ಗಾಂಧಿ ವಿದ್ಯಾರ್ಥಿಗಳಿಗೆ ಬರೆದ ಪತ್ರದಲ್ಲಿ ಹೇಳಿದ್ದು, ನಿಮ್ಮನ್ನು ಹಿಂದುಳಿಯುವಂತೆ ಮಾಡಿರುವ ಭ್ರಷ್ಟಾಚಾರವನ್ನು ಕೊನೆಗಾಣಿಸುತ್ತೇವೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್