ಸುಬ್ರಮಣಿಯನ್ ಸ್ವಾಮಿ 
ದೇಶ

ಸುನಂದಾ ಸಾವು: ಸುಬ್ರಮಣಿಯನ್ ಸ್ವಾಮಿ ಅರ್ಜಿಗೆ ತರೂರ್, ದೆಹಲಿ ಪೊಲೀಸರ ವಿರೋಧ

ಕಾಂಗ್ರೆಸ್ ನಾಯಕ ಶಶಿ ತರೂರ್ ಅವರ ಪತ್ನಿ ಸುನಂದಾ ಪುಷ್ಕರ್ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂದಪಟ್ಟಂತೆ ಬಿಜೆಪಿ ಸಂಸದ.....

ನವದೆಹಲಿ: ಕಾಂಗ್ರೆಸ್ ನಾಯಕ ಶಶಿ ತರೂರ್ ಅವರ ಪತ್ನಿ ಸುನಂದಾ ಪುಷ್ಕರ್ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂದಪಟ್ಟಂತೆ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿರುವ ಅರ್ಜಿಗೆ, ಆರೋಪಿ ತರೂರ್ ಹಾಗೂ ದೆಹಲಿ ಪೊಲೀಸರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಸುಬ್ರಮಣಿಯನ್ ಸ್ವಾಮಿ ಅರ್ಜಿ ಸಮರ್ಥನಿಯವಲ್ಲ. ಹೀಗಾಗಿ ಅದನ್ವ ವಜಾಗೊಳಿಸಬೇಕು ಎಂದು ಶಶಿ ತರೂರ್ ಪರ ವಕೀಲರು ಹಾಗೂ ಸರ್ಕಾರಿ ಅಭಿಯೋಜಕರು ವಾದಿಸಿದ್ದಾರೆ.
ವಾದ - ಪ್ರತಿವಾದ ಆಲಿಸಿದ ಹೆಚ್ಚುವರಿ ಮುಖ್ಯ ಮೆಟ್ರೋಪೊಲಿಟನ್ ಮ್ಯಾಜಿಸ್ಟ್ರೇಟ್ ಸಮರ್ ವಿಶಾಲ್ ಅವರು, ಡಿಸೆಂಬರ್ 10ಕ್ಕೆ ತೀರ್ಪು ಪ್ರಕಟಿಸುವುದಾಗಿ ತಿಳಿಸಿದ್ದಾರೆ.
ಸುನಂದಾ ಪುಷ್ಕರ್ ಸಾವಿನ ಬಳಿಕ ನಿಗಾ ಸಮಿತಿಯ ತನಿಖಾ ವರದಿಯನ್ನು ನ್ಯಾಯಾಲಯದ ಎದುರು ಸಲ್ಲಿಸಬೇಕೆಂದು ದೆಹಲಿ ಪೊಲೀಸರಿಗೆ ನಿರ್ದೇಶಿಸಿ ಎಂದು ಸುಬ್ರಮಣಿಯನ್ ಸ್ವಾಮಿ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಅಲ್ಲದೆ ಈ ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌ಗೆ ನೆರವಾಗಬೇಕೆಂದು ದೆಹಲಿ ಪೊಲೀಸರಿಗೆ ಸೂಚಿಸಬೇಕೆಂದು ಸಹ ಕೋರ್ಟ್‌ನಲ್ಲಿ ಸುಬ್ರಮಣಿಯನ್ ಸ್ವಾಮಿ ಮನವಿ ಮಾಡಿಕೊಂಡಿದ್ದರು. 
ಜನವರಿ 17, 2014ರಲ್ಲಿ ನಡೆದ ಸುನಂದಾ ಪುಷ್ಕರ್‌ ನಿಗೂಢ ಸಾವಿನ ಪ್ರಕರಣವನ್ನು ಪೊಲೀಸರು ಆತ್ಮಹತ್ಯೆ ಎಂದು ಮೇ 2018ರಲ್ಲಿ ಪರಿಗಣಿಸಿದ್ದರು.
ಇದು ಕೊಲೆ ಅಲ್ಲ, ಆತ್ಮಹತ್ಯೆ ಎಂದು ಪರಿಗಣಿಸಿದ್ದ ದೆಹಲಿ ಪೊಲೀಸರು, ಪತಿ, ಕಾಂಗ್ರೆಸ್‌ ಸಂಸದ ಶಶಿ ತರೂರ್ ವಿರುದ್ಧ ಕೌಟುಂಬಿಕ ದೌರ್ಜನ್ಯ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಕೇಸು ದಾಖಲಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಹಲವು ಕುಟುಂಬಗಳ ಹೆಣ್ಮಕ್ಕಳ ಮರ್ಯಾದೆ ಕಳೆದ ಪುಣ್ಯಾತ್ಮ ಡಿಕೆಶಿ; ಪ್ರಜ್ವಲ್​​ ಕೇಸ್​ ಹಿಂದಿದ್ದವರಿಂದ ಮಾಜಿ ಸಿಎಂ ಸ್ಟಿಂಗ್​​ ಆಪರೇಷನ್: HDK ಹೊಸ ಬಾಂಬ್

ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಶನ್: ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಪೆನ್ ಡ್ರೈವ್ ಸಲ್ಲಿಕೆ; ನ್ಯಾಯಾಂಗ ತನಿಖೆಗೆ ಆಗ್ರಹ!

ಎಲ್ಲಾ ಪ್ರತಿಭಟನೆಗಳೂ ಒಂದೇ: 'ಚಾಯ್ ಪೆ ಚರ್ಚೆ' ಗೂ ಮುನ್ನ ರಾಹುಲ್ ಹೇಳಿಕೆ!

ಬೆಂಗಳೂರಿನಲ್ಲಿ SIR ಪ್ರತಿಭಟನೆ ವೇಳೆ ಪೊಲೀಸ್ ಕ್ರಮ: ಮರು ಪರಿಶೀಲನೆಗೆ ಪ್ರಿಯಾಂಕ್ ಖರ್ಗೆ ಆದೇಶ!

ಪುಣೆ ಟೆಕ್ಕಿ ಆತ್ಮಹತ್ಯೆ: ಡೆತ್‌ನೋಟ್‌ ಪತ್ತೆ; ಸಂಬಳ, ತವರು ಮನೆಯ ಫ್ಲಾಟ್ ವರ್ಗಾಯಿಸುವಂತೆ ಅತ್ತೆ-ಮಾವ ಒತ್ತಡ!