ವಾಹನಕ್ಕೆ ಬೆಂಕಿ ಹಚ್ಚಿರುವುದು 
ದೇಶ

ರಾಜಸ್ಥಾನ ಚುನಾವಣೆ: ಫ‌ತೇಪುರ್ ಸಿಕಾರ್ ನಲ್ಲಿ ಭುಗಿಲೆದ್ದ ಹಿಂಸಾಚಾರ

ಶಾಂತ ರೀತಿಯಲ್ಲಿ ನಡೆಯುತ್ತಿದ್ದ ರಾಜಸ್ಥಾನ ವಿಧಾನಸಭಾ ಚುನಾವಣೆ ಮಧ್ಯಾಹ್ನದ ವೇಳೆಗೆ ಹಠಾತ್‌ ಹಿಂಸಾಚಾರಕ್ಕೆ ತಿರುಗಿದ್ದು, ...

ಜೈಪುರ್: ಶಾಂತ ರೀತಿಯಲ್ಲಿ ನಡೆಯುತ್ತಿದ್ದ ರಾಜಸ್ಥಾನ ವಿಧಾನಸಭಾ ಚುನಾವಣೆ ಮಧ್ಯಾಹ್ನದ ವೇಳೆಗೆ ಹಠಾತ್‌ ಹಿಂಸಾಚಾರಕ್ಕೆ ತಿರುಗಿದ್ದು, ವಾಹನಗಳಿಗೆ ಬೆಂಕಿ ಹಚ್ಚಿ, ಸೊತ್ತುಗಳನ್ನು ಧ್ವಂಸಗೊಳಿಸಿದ್ದಾರೆ. 
ಇಂದು ಫ‌ತೇಪುರ್ ಸಿಕಾರ್‌ ನ ಸುಭಾಶ್ ಶಾಲೆಯ ಮತಗಟ್ಟೆಯಲ್ಲಿ ಇದ್ದಕ್ಕಿದ್ದಂತೆಯೇ ಹಿಂಸಾಚಾರ ನಡೆದಿದ್ದು, ಉದ್ರಿಕ್ತ ಜನರು ಗುಂಪು ವಾಹನಗಳಿಗೆ ಬೆಂಕಿ ಹಚ್ಚಿದೆ ಎಂದು ಎಎನ್ಐ ವರದಿ ಮಾಡಿದೆ.
ಹಿಂಸಾಚಾರದಿಂದಾಗಿ ಕೆಲಕಾಲ ಮತದಾನ ಸ್ಥಗಿತಗೊಳಿಸಲಾಗಿತ್ತು. ಘಟನೆಯ ಮಾಹಿತಿ ಪಡೆದ ಹೆಚ್ಚುವರಿ ಭದ್ರತಾ ಸಿಬಂದಿಗಳು ಸ್ಥಳಕ್ಕೆ ಧಾವಿಸಿ ದುಷ್ಕರ್ಮಿಗಳನ್ನು ವಶಕ್ಕೆ ತೆಗೆದುಕೊಂಡರು. ಬಳಿಕ ಮತಾದಾನ ಮುಂದುವರೆದಿದೆ.
ದಿಢೀರ್ ಹಿಂಸಾಚಾರಕ್ಕೆ ಕಾರಣ ಇನ್ನು ತಿಳಿದುಬಂದಿಲ್ಲ.
ಈ ಹಠಾತ್‌ ಹಿಂಸೆ, ಗಲಭೆಯಿಂದಾಗಿ ಸುಮಾರು 30 ನಿಮಿಷಗಳ ಕಾಲ ಮತದಾನವನ್ನು ಅಮಾನತುಗೊಳಿಸಲಾಯಿತು. 
ಹಿಂಸೆ ಸ್ಫೋಟಗೊಳ್ಳಲು ಕಾರಣವೇನೆಂದು ತತ್‌ಕ್ಷಣಕ್ಕೆ ಗೊತ್ತಾಗಿಲ್ಲ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು ಮತದಾನ ಮತ್ತೆ ಮುಂದುವರಿದಿದೆ. ಹೆಚ್ಚಿನ ಭದ್ರತಾ ಸಿಬಂದಿಗಳು ಇಲ್ಲಿ ಕರ್ತವ್ಯ ನಿರತರಾಗಿದ್ದಾರೆ. 
ಮಧ್ಯಾಹ್ನ 1 ಗಂಟೆಯ ವರೆಗಿನ ಅವಧಿಯಲ್ಲಿ ಶೇ.41.53 ಮತದಾನ ನಡೆದಿರುವುದು ದಾಖಲಾಗಿದೆ.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ