ಜಮ್ಮು ಕಾಶ್ಮೀರ: ಶ್ರೀನಗರ ಹೊರವಲಯದಲ್ಲಿ ಉಗ್ರರು-ಸೇನಾಪಡೆ ನಡುವೆ ಎನ್ ಕೌಂಟರ್ ಪ್ರಾರಂಭ
ಜಮ್ಮು ಮತ್ತು ಕಾಶ್ಮೀರದ ಬೇಸಿಗೆಯ ರಾಜಧಾನಿ ಶ್ರೀನಗರ ಹೊರವಲಯದಲ್ಲಿ ಉಗ್ರಗಾಮಿಗಳು ಹಾಗೂ ಸೇನಾ ಪಡೆಗಳ ನಡುವೆ ಶನಿವಾರ ಎನ್ ಕೌಂಟರ್ ಪ್ರಾರಂಭವಾಗಿರುವುದಾಗಿ ಪೋಲೀಸರು ಹೇಳಿದ್ದಾರೆ.
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬೇಸಿಗೆಯ ರಾಜಧಾನಿ ಶ್ರೀನಗರ ಹೊರವಲಯದಲ್ಲಿ ಉಗ್ರಗಾಮಿಗಳು ಹಾಗೂ ಸೇನಾ ಪಡೆಗಳ ನಡುವೆ ಶನಿವಾರ ಎನ್ ಕೌಂಟರ್ ಪ್ರಾರಂಭವಾಗಿರುವುದಾಗಿ ಪೋಲೀಸರು ಹೇಳಿದ್ದಾರೆ.
ನಗರದ ಹೊರವಲಯದಲ್ಲಿರುವ ಶ್ರೀನಗರ-ಬಂಡೀಪೂರ ರಸ್ತೆಯ ಮುಜಗುಂದ್ ಪ್ರದೇಶದಲ್ಲಿ ಇಂದು ಸಂಜೆ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಪ್ರಾರಂಭಿಸಿದೆ. ಈ ವೇಳೆ ಉಗ್ರಗಾಮ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ.
ಇದಕ್ಕೆ ಪ್ರತಿಯಾಗಿ ಸೇನಾಪಡೆಯು ಎನ್ ಕೌಂಟರ್ ನಡೆಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ
.ಗುಂಡಿನ ಚಕಮಕಿ ಮುಂದುವರಿದಿದ್ದು ಮತ್ತಷ್ಟು ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ಅವರು ವಿವರಿಸಿದ್ದಾರೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.