ದೇಶ

ಜಮ್ಮು-ಕಾಶ್ಮೀರದಲ್ಲಿ ಭರ್ಜರಿ ಕಾರ್ಯಾಚರಣೆ: 3 ಉಗ್ರರನ್ನು ಹೊಡೆದುರುಳಿಸಿದ ಸೇನೆ

Manjula VN
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮುಜ್ಗುಂದ್ ಎಂಬಲ್ಲಿ ಭಾರತೀಯ ಸೇನಾ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಮೂವರು ಉಗ್ರರನ್ನು ಹೊಡೆದುರುಳಿಸಿದೆ. 
ಮುಜ್ಗುಂದ್ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಹಿನ್ನಲೆಯಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆಗಿಳಿದಿತ್ತು. ಈ ವೇಳೆ ಉಗ್ರರು ಸೇನಾಪಡೆಗಳ ಮೇಲೆ ಏಕಾಏಕಿ ದಾಳಿ ನಡೆಸಿದ್ದಾರೆ. ಕೂಡಲೇ ಉಗ್ರರಿಗೆ ದಿಟ್ಟ ಉತ್ತರ ನೀಡಿರುವ ಭದ್ರತಾಪಡೆಗಳು 3 ಉಗ್ರರನ್ನು ಹತ್ಯೆ ಮಾಡಿದೆ. ಎನ್ ಕೌಂಟರ್ ನಡೆದ ಸ್ಥಳದಲ್ಲಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು ಹಾಗೂ ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದ್ದು, ಉಗ್ರರ ಗುರ್ತಿಕೆ ಕುರಿತು ತನಿಖೆ ನಡೆಸಬೇಕಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 
ಬಂಡಿಪೋರಾದ ಮುಜ್ಗುಂದ್ ಪ್ರದೇಶದಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಭದ್ರತಾಗಳು ನಿನ್ನೆಯಿಂದಲೂ ಸುದೀರ್ಘವಾಗಿ ಕಾರ್ಯಾಚರಣೆ ನಡೆಸುತ್ತಿಲೇ ಇದೆ. ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಐವರು ಯೋಧರು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. 
ಪ್ರಸ್ತುತ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದ್ದು, ಯಾವುದೇ ರೀತಿಯ ಅಹಿತಕ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಿರುವ ಅಧಿಕಾರಿಗಲು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದ್ದಾರೆ. 
SCROLL FOR NEXT