ನವದೆಹಲಿ: ಯುಪಿಎ ಅವಧಿಯಲ್ಲಿ ಲಾಭ ಪಡೆದುಕೊಂಡಿದ್ದ ಮದ್ಯ ಉದ್ಯಮಿ ವಿಜಯ್ ಮಲ್ಯ ಅವರ ಮೇಲೆ ಪ್ರಕರಣ ದಾಖಲಿಸಿ ಲಂಡನ್ ನಿಂದ ಕರೆತರಲಾಗುತ್ತಿದೆ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ಇಂಗ್ಲೆಂಡ್ ನ್ಯಾಯಾಲಯದ ಆದೇಶದಿಂದ ಬ್ಯಾಂಕುಗಳಿಗೆ 9 ಸಾವಿರ ಕೋಟಿ ರೂಪಾಯಿ ವಂಚಿಸಿದ ದೇಶಭ್ರಷ್ಟ ಅಪರಾಧಿಯನ್ನು ಭಾರತಕ್ಕೆ ಕರೆತರುವ ಸರ್ಕಾರದ ಪ್ರಯತ್ನ ಫಲಪದ್ರವಾದಂತಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಭಾರತಕ್ಕೆ ಅತ್ಯುತ್ತಮ ದಿನ. ಭಾರತಕ್ಕೆ ಮೋಸ ಮಾಡಿ ಯಾರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಇಂಗ್ಲೆಂಡ್ ನ್ಯಾಯಾಲಯದ ತೀರ್ಪನ್ನು ಸ್ವಾಗತಿಸುತ್ತೇನೆ. ಯುಪಿಎ ಅವಧಿಯಲ್ಲಿ ಲಾಭ ಪಡೆದಿದ್ದ ಅಪರಾಧಿಯನ್ನು ಪ್ರಕರಣದಡಿ ಎನ್ ಡಿಎ ಕರೆತರುತ್ತಿದೆ ಎಂದು ಅರುಣ್ ಜೇಟ್ಲಿ ಟ್ವೀಟ್ ಮಾಡಿದ್ದಾರೆ.
ಮತ್ತೊಂದೆದೆ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಯಾರೊಬ್ಬರೂ ಭಾರತಕ್ಕೆ ಮೋಸ ಮಾಡಲು ಸಾಧ್ಯವಿಲ್ಲ. ಇಂಗ್ಲೆಂಡ್ ನ್ಯಾಯಾಲಯದ ಆದೇಶ ಸರ್ಕಾರದ ಪ್ರಯತ್ನಕ್ಕೆ ಸಂದ ಜಯ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಸುರೇಶ್ ಪ್ರಭು ಟ್ವೀಟ್ ಮಾಡಿದ್ದಾರೆ.