ದೇಶ

ಭಾರತಕ್ಕೆ ವಿಜಯ್ ಮಲ್ಯ ಗಡಿಪಾರು?: ಲಂಡನ್ ಕೋರ್ಟ್​ನಲ್ಲಿ ಇಂದು ತೀರ್ಪು

Srinivasamurthy VN
ಲಂಡನ್: ಭಾರತದ ಬ್ಯಾಂಕ್ ಗಳಿಗೆ ಸಾಲ ಮರುಪಾವತಿಸದೆ ವಿದೇಶದಲ್ಲಿ ನೆಲೆಸಿರುವ ಉದ್ಯಮಿ ವಿಜಯ್ ಮಲ್ಯ ಗಡಿಪಾರು ಕುರಿತು ಲಂಡನ್ ಕೋರ್ಟ್ ಸೋಮವಾರ ತೀರ್ಪು ಪ್ರಕಟಿಸಲಿದೆ.
ವೆಸ್ಟ್ ಮಿನ್ ಸ್ಟರ್ ಮ್ಯಾಜಿಸ್ಟ್ರೇಟ್ ಕೋರ್ಟ್ ನಲ್ಲಿ ಮಲ್ಯ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ಮಲ್ಯರನ್ನು ಭಾರತಕ್ಕೆ ಗಡಿಪಾರು ಮಾಡುವ ಆದೇಶ ಹೊರಬೀಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ಸಿಬಿಐ ಜಂಟಿ ನಿರ್ದೇಶಕ ಎ. ಸಾಯಿ ಮನೋಹರ್ ನೇತೃತ್ವದಲ್ಲಿ ಸಿಬಿಐ ಹಾಗೂ ಇ.ಡಿ ಅಧಿಕಾರಿಗಳ ತಂಡ ಈಗಾಗಲೇ ಬ್ರಿಟನ್ ತಲುಪಿದೆ.
ಗಡಿಪಾರು ತೀರ್ಪು ಹೊರ ಬಿದ್ದರೆ 28 ದಿನಗಳ ಗಡುವು
ಒಂದು ವೇಳೆ ಮಲ್ಯ ಗಡಿಪಾರು ಮಾಡುವಂತೆ ಕೋರ್ಟ್ ತೀರ್ಪು ನೀಡಿದರೆ, ಈ ಆದೇಶ ಬ್ರಿಟನ್ ಗೃಹ ಕಾರ್ಯದರ್ಶಿಗೆ ತಲುಪುತ್ತದೆ. ಸರ್ಕಾರದ ಪರವಾಗಿ ಕಾರ್ಯದರ್ಶಿ ಗಡಿಪಾರು ಆದೇಶ ಹೊರಡಿಸಿ ಹಸ್ತಾಂತರ ಪ್ರಕ್ರಿಯೆಗೆ ಚಾಲನೆ ನೀಡುತ್ತಾರೆ. ಗಡಿಪಾರು ಆದೇಶ ಪ್ರಶ್ನಿಸಿ ಮಲ್ಯ ಪರವಾಗಿ ಹೈಕೋರ್ಟ್​ಗೆ ಮೇಲ್ಮನವಿ ಅರ್ಜಿ ಸಲ್ಲಿಕೆಯಾಗದಿದ್ದರೆ ಮತ್ತು ಗೃಹ ಕಾರ್ಯದರ್ಶಿ ಕೂಡ ಗಡಿಪಾರು ಆದೇಶ ಹೊರಡಿಸಿದ 28 ದಿನಗಳ ಒಳಗೆ ಮಲ್ಯ ಬ್ರಿಟನ್ ತೊರೆಯಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
SCROLL FOR NEXT