ರಮಣ್ ಸಿಂಗ್ 
ದೇಶ

ಸೋಲಿನ ಹೊಣೆ ಹೊರುತ್ತೇನೆ, ಜನರ ಪ್ರೀತಿಗೆ ಅಭಾರಿ: ಛತ್ತೀಸ್ ಗಢ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ರಮಣ್ ಸಿಂಗ್

ಛತ್ತೀಸ್ ಗಢ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿಯ ಸತತ 15 ವರ್ಷಗಳ ಆಡಳಿತವನ್ನು ಕೊನೆಗೊಳಿಸುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ.

ರಾಯ್ ಪುರ: ಛತ್ತೀಸ್ ಗಢ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿಯ ಸತತ 15 ವರ್ಷಗಳ ಆಡಳಿತವನ್ನು ಕೊನೆಗೊಳಿಸುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ. 
90 ಕ್ಷೇತ್ರಗಳಿರುವ ನಕ್ಸಲ್ ಪೀಡಿತ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ 67 ಸ್ಥಾನಗಳೊಂದಿಗೆ ಅಧಿಕಾರಕ್ಕೇರಿದರೆ, 18 ಸ್ಥಾನಗಳಿಕೆ ಕುಸಿದಿರುವ ಬಿಜೆಪಿ ಹೀನಾಯ ಸೋಲು ಕಂಡಿದೆ. ಸೋಲಿನ ಹಿನ್ನೆಲೆಯಲ್ಲಿ ಛತ್ತೀಸ್ ಗಢ ಸಿಎಂ ಸ್ಥಾನಕ್ಕೆ ರಮಣ್ ಸಿಂಗ್ ರಾಜೀನಾಮೆ ನೀಡಿದ್ದಾರೆ. 
ರಾಜೀನಾಮೆ ಬಳಿಕ ಪ್ರತಿಕ್ರಿಯೆ ನೀಡಿರುವ ರಮಣ್ ಸಿಂಗ್, "ಜನತೆ 3 ಬಾರಿ ಆಡಳಿತ ನಡೆಸಲು ಅವಕಾಶ ನೀಡಿದ್ದರು, ನನ್ನ ಜೀವನ ಪೂರ್ತಿ ಕೆಲಸ ಮಾಡಿದರೂ ಜನತೆ ನನಗೆ ನೀಡಿರುವ ಪ್ರೀತಿ ಗೌರವಗಳನ್ನು ಹಿಂತಿರುಗಿಸುವುದಕ್ಕೆ ಆಗುವುದಿಲ್ಲ". ಇಂದು ರಾಜ್ಯಪಾಲರನ್ನು ಭೇಟಿ ಮಾಡಿ ರಾಜೀನಾಮೆ ನೀಡಿದ್ದೇನೆ.  ನನ್ನ ನೇತೃತ್ವದಲ್ಲಿ ಬಿಜೆಪಿ ಚುನಾವಣೆ ಎದುರಿಸಿದ್ದು, ಸೋಲಿನ ಹೊಣೆಯನ್ನೂ ನಾನೇ ಹೊರುತ್ತೇನೆ ಎಂದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ಮೃತರ ಸಂಖ್ಯೆ 165ಕ್ಕೆ ಏರಿಕೆ; ನಾಪತ್ತೆಯಾದವರಲ್ಲಿ 133 ಮಂದಿ ಭಾರತೀಯರು

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ