ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ಅಂತ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ ಎಂಬುದನ್ನು ಪಂಚರಾಜ್ಯಗಳ ಚುನಾವಣೆ ಫಲಿತಾಂಶ ತೋರಿಸಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಹೇಳಿದ್ದಾರೆ.
ಐದು ರಾಜ್ಯಗಳ ಪೈಕಿ ಮಧ್ಯ ಪ್ರದೇಶ, ರಾಜಸ್ಥಾನ, ಛತ್ತೀಸ್ ಗಢದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿರುವುದು ಮೋದಿ ಸರ್ಕಾರದ ಅಂತ್ಯಕ್ಕೆ ಕ್ಷಣಗಣನೆ ಆರಂಭವಾಗಿರುವುದನ್ನು ತೋರಿಸುತ್ತದೆ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.
ಛತ್ತೀಸ್ ಗಢದಲ್ಲಿ ಸ್ಪಷ್ಟ ಬಹುಮತ ಹಾಗೂ ರಾಜಸ್ಥಾನದಲ್ಲಿ ಸರಳ ಬಹುಮತ ಪಡೆದಿರುವ ಕಾಂಗ್ರೆಸ್, ಮಧ್ಯ ಪ್ರದೇಶದಲ್ಲಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಇತರರ ಸಹಕಾರದೊಂದಿಗೆ ಸರ್ಕಾರ ರಚಿಸುವ ಸಾಧ್ಯತೆ ಇದೆ.