ರಾಜಸ್ತಾನ ಚುನಾವಣಾ ಫಲಿತಾಂಶ: ತ್ರಿಪುರ ಸುಂದರಿ ದೇವಾಲಯಕ್ಕೆ ವಸುಂದರಾ ರಾಜೇ ಭೇಟಿ
ರಾಜಸ್ತಾನ ವಿಧಾನಸಭೆ ಚುನಾವಣೆ ಮತ ಎಣಿಕೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ವಸುಂದರಾ ರಾಜೇ ಬನ್ಸ್ವಾರ ದಿಂದ 20 ಕಿಮೀ ದೂರದಲ್ಲಿರುವ ...
ಬನ್ಸ್ವಾರ: ರಾಜಸ್ತಾನ ವಿಧಾನಸಭೆ ಚುನಾವಣೆ ಮತ ಎಣಿಕೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ವಸುಂದರಾ ರಾಜೇ ಬನ್ಸ್ವಾರ ದಿಂದ 20 ಕಿಮೀ ದೂರದಲ್ಲಿರುವ ಮಾ ತ್ರಿಪುರ ಸುಂದ್ರಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
18 ಕೈಗಳಿರುವ ಈ ದೇವಿಯನ್ನು ಕಪ್ಪು ಕಲ್ಲಿನಲ್ಲಿ ಕೆತ್ತಲಾಗಿದೆ, ಈ ವಿಗ್ರಹ 700 ವರ್ಷ ಹಳೇಯ ವಿಗ್ರಹ ಎಂದು ಹೇಳಲಾಗುತ್ತಿದೆ.
ರಾಜಸ್ತಾನದಲ್ಲಿ 200 ವಿಧಾನಸಭೆ ಕ್ಷೇತ್ರಗಳಿವೆ, ಇಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪ್ರಮುಖವಾಹಗಿ ಸೆಣಸಾಡುತ್ತಿವೆ, 2013 ರ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಸಿಕ್ಕಿದ್ದು, ವಸುಂದರಾ ರಾಜೇ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದರು, ರಾಜಸ್ತಾನದ ಮೊದಲ ಮಹಿಳಾ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.