ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ
ಮೊಹಾಲಿ: ಜನರಿಗ ಏನು ಬೇಕೆಂಬುದನ್ನು ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ತಿಳಿಸಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಹೇಳಿದ್ದಾರೆ.
ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಜನರಿಗೆ ಏನು ಬೇಕು, ಮುಂದಿನ ವರ್ಷದ ಸಂಸತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲವು ಹಾಗೂ ಕೇಂದ್ರದಲ್ಲಿ ಸರ್ಕಾರ ರಚನೆ ಮಾಡುವುದನ್ನು ತೋರಿಸಲಿದೆ ಎಂದು ಹೇಳಿದ್ದಾರೆ.
ಬಿಜೆಪಿಗೆ ತನ್ನ ದಾರಿಯನ್ನು ನಾವು ತೋರಿಸುತ್ತೇವೆ. ಲೋಕಸಭಾ ಚುನಾವಣೆ 2018ರಲ್ಲಿ ಸೋಲು ಕಾಣುವಂತೆ ಮಾಡುತ್ತೇವೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರವನ್ನು ಧರೆಗುರುಳಿಸುತ್ತೇವೆಂದು ತಿಳಿಸಿದ್ದಾರೆ.
ಮೋದಿಯವರ ರಾಜಕೀಯ ಲಾಭಕ್ಕಾಗಿ ಸುಪ್ರೀಂಕೋರ್ಟ್, ಸೇನೆ ಸೇರಿ ಕೇಂದ್ರದ ಎಲ್ಲಾ ಸಂಸ್ಥೆಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ. ಈ ಮೂಲಕ ದೇಶದ ಸ್ವಾತಂತ್ರ್ಯವನ್ನು ಬೆದರಿಕೆಗೆ ಒಡ್ಡುತ್ತಿದ್ದಾರೆ. ಕೇಂದ್ರ ಸಂಸ್ಥೆಗಳನ್ನು ರಕ್ಷಣೆ ಮಾಡಲು ನಾವು ಹೋರಾಡುತ್ತೇವೆ. ಬಿಜೆಪಿ, ಆರ್'ಎಸ್ಎಸ್ ನಂತೆ ನಾವಲ್ಲ ಎಂಬುದನ್ನು ತೋರಿಸುತ್ತೇವೆಂದಿದ್ದಾರೆ.
ರೈತರ ಸಮಸ್ಯೆಗಳು, ನಿರುದ್ಯೋಗದಂತಹ ಪ್ರಮುಖ ವಿಚಾರಗಳ ಬಗ್ಗೆ ಬೆಳಕು ಚೆಲ್ಲಲು ಕೇಂದ್ರ ಸರ್ಕಾರ ಮಾಧ್ಯಮಗಳಿಗೆ ಬಿಡುತ್ತಿಲ್ಲ. ಬಿಜೆಪಿ ಸರ್ಕಾರದ ವಿರುದ್ಧ ಜನರಲ್ಲಿ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಆದರೆ, ಮಾಧ್ಯಮಗಳು ಇದನ್ನು ಬಹಿರಂಗಪಡಿಸುತ್ತಿಲ್ಲ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics