'ಬಿಜೆಪಿ' ಸ್ಥಾನ ಏನು ಎಂಬುದನ್ನು ಜನ ಸೆಮಿಫೈನಲ್ ನಲ್ಲಿ ತೋರಿಸಿದ್ದಾರೆ: ಮಮತಾ ಬ್ಯಾನರ್ಜಿ
: 2019ರ ಲೋಕಸಭೆ ಚುನಾವಣೆ ಗೆ ಪಂಚರಾಜ್ಯಗಳ ವಿಧಾನಸಭೆ ಚುನಾವಣಾ ಫಲಿತಾಂಶ ಸೆಮಿ ಫೈನಲ್ ಆಗಿದ್ದು, ಬಿಜೆಪಿ ಎಲ್ಲಿದೆ ಎಂಬದನ್ನು ಜನ ತೋರಿಸಿಕೊಟ್ಟಿದ್ದಾರೆ ....
ನವದೆಹಲಿ: 2019ರ ಲೋಕಸಭೆ ಚುನಾವಣೆ ಗೆ ಪಂಚರಾಜ್ಯಗಳ ವಿಧಾನಸಭೆ ಚುನಾವಣಾ ಫಲಿತಾಂಶ ಸೆಮಿ ಫೈನಲ್ ಆಗಿದ್ದು, ಬಿಜೆಪಿ ಎಲ್ಲಿದೆ ಎಂಬದನ್ನು ಜನ ತೋರಿಸಿಕೊಟ್ಟಿದ್ದಾರೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಗಳ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿದ ಅವರು ಪ್ರಜಾಪ್ರಭುತ್ವದಲ್ಲಿ ಜನರೇ ಮ್ಯಾನ್ ಆಪ್ ದಿ ಮ್ಯಾಚ್ ಎಂದು ವಿವರಿಸಿದ್ದಾರೆ.
ಜನ ಬಿಜೆಪಿ ವಿರುದ್ಧ ಮತ ಚಲಾಯಿಸಿದ್ದಾರೆ, ಇದು ದೇಶದ ಜನತೆಯ ಆದೇಶ, ಅನ್ಯಾಯದ ವಿರುದ್ಧದ ಗೆಲುವು, ಪ್ರಜಾಪ್ರಭುತ್ವದ ಗೆಲುವು ಎಂದು ಟ್ವೀಟ್ ಮಾಡಿದ್ದಾರೆ.
ದಲಿತರ ಮೇಲೆ ದೌರ್ಜನ್ಯ, ರೈತರು ಯುವಕರಿಗಾಗಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ಮಮತಾ ಸರಣಿ ಟ್ವೀಟ್ ಮಾಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.