ಚೆನ್ನೈ: ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಹಿನ್ನಡೆಯಾಗಿದ್ದು, ಇದು ಪ್ರಧಾನಿ ಮೋದಿ ಅವರ ವರ್ಚಸ್ಸು ಕಡಿಮೆಯಾಗಿರುವುದರ ಪ್ರತೀಕ ಎಂದು ಸೂಪರ್ ಸ್ಟಾರ್ ರಜನಿಕಾಂತ್ ಹೇಳಿದ್ದಾರೆ.
ನಾಳೆ ಮುಂಬೈನಲ್ಲಿ ನಡೆಯಲಿರುವ ಉದ್ಯಮಿ ಮುಖೇಶ್ ಅಂಬಾನಿ ಪುತ್ರಿ ಇಶಾ ಅಂಬಾನಿ ಮದುವೆಗೆ ತೆರಳುತ್ತಿದ್ದ ವೇಳೆ ಚೆನ್ನೈ ಏರ್ಪೋರ್ಟ್ನಲ್ಲಿ ಮಾತನಾಡಿದ ಅವರು, ಪಂಚರಾಜ್ಯ ಚುನಾವಣೆಯ ಫಲಿತಾಂಶದಿಂದ ಬಿಜೆಪಿ ತನ್ನ ಶಕ್ತಿ ಕಳೆದುಕೊಂಡಂತಹ ಲಕ್ಷಣಗಳು ಕಾಣಿಸುತ್ತಿವೆ ಎಂದು ಹೇಳಿದರು.
ಅಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಇಮೇಜ್ ಸಹ ಕಡಿಮೆಯಾಗಿದೆ ಎಂದು ಅವರು ಹೇಳಿದ್ದಾರೆ.
ಇನ್ನು ನಿನ್ನೆ ಪ್ರಕಟಗೊಂಡ ಪಂಚ ರಾಜ್ಯ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ಹೀನಾಯ ಸೋಲು ಕಂಡಿದ್ದು, ತನ್ನ ನಿಯಂತ್ರಣದಲ್ಲಿದ್ದ ಮಧ್ಯ ಪ್ರದೇಶ, ಛತ್ತೀಸ್ ಘಡ, ರಾಜಸ್ಥಾನದಲ್ಲಿ ಅಧಿಕಾರಿ ಕಳೆದುಕೊಂಡಿದೆ. ಅಂತೆಯೇ ತೆಲಂಗಾಣದಲ್ಲಿ ಟಿಆರ್ ಎಸ್ ಅಧಿಕಾರ ರಚನೆ ಮಾಡಲಿದ್ದು, ಮಿಜೋರಾಂ ನಲ್ಲಿ ಎಂಎನ್ಎಫ್ ಅಧಿಕಾರದ ಗದ್ದುಗೇರಿದೆ. ಆ ಮೂಲಕ ಲೋಕಸಭಾ ಚುನಾವಣೆಗೆ ಸೆಮಿಫೈನಲ್ ಹೇಳಲಾಗುತ್ತಿದ್ದ ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಮುಗ್ಗರಿಸಿದೆ.