ಭೂಪಾಲ್: ನಮಗೆ ಬಹುಮತ ಸಿಕ್ಕಿಲ್ಲ ಹಾಗಾಗಿ ಮಧ್ಯಪ್ರದೇಶದಲ್ಲಿ ನಾವು ಸರ್ಕಾರ ರಚಿಸುತ್ತಿಲ್ಲ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.
ಸೋಲಿನ ಹೊಣೆ ಹೊತ್ತು, ನಾನು ನನ್ನ ರಾಜಿನಾಮೆಯನ್ನು ರಾಜ್ಯಪಾಲರಿಗೆ ನೀಡುತ್ತಿದ್ದೇನೆ, ಕಮಲ್ ನಾಥ್ ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.ರಾಜಭವನಕ್ಕೆ ಆಗಮಿಸಿದ ಶಿವರಾಜ್ ಸಿಂಗ್ ರಾಜ್ಯಪಾಲರಿಗೆ ತಮ್ಮ ರಾಜಿನಾಮೆ ಸಲ್ಲಿಸಿದ್ದಾರೆ.
ಚುನಾವಣಾ ಆಯೋಗ ಸುಧೀರ್ಘ ಮತ ಎಣಿಕೆಯ ಬಳಿಕ ಬುಧವಾರ ಬೆಳಗ್ಗೆ 7.20 ರ ವೇಳೆ ಅಧಿಕೃತವಾಗಿ ಫಲಿತಾಂಶ ಪ್ರಕಟ ಮಾಡಿದೆ.
ಅಂತಿಮ ಫಲಿತಾಂಶದಲ್ಲಿ ಕಾಂಗ್ರೆಸ್ 114 ಸ್ಥಾನಗಳನ್ನು ಗೆದ್ದಿದ್ದು, ಸರಳ ಬಹುಮತಕ್ಕೆ 2 ಸ್ಥಾನಗಳು ಕಡಿಮೆಯಾಗಿವೆ. ಈಗಾಗಲೇ ಕಾಂಗ್ರೆಸ್ ನಾಯಕರು ಪಕ್ಷೇತರರೊಂದಿಗೆ ಮಾತುಕತೆ ನಡೆಸಿದ್ದಾರೆ. 4 ಮಂದಿ ಪಕ್ಷೇತರ ಸದಸ್ಯರು ಆಯ್ಕೆಯಾಗಿದ್ದಾರೆ.
ಬಿಜೆಪಿ 109 ಸ್ಥಾನಗಳನ್ನು ಗೆದ್ದಿದ್ದು, ಬಿಎಸ್‌ಪಿ 2 ಮತ್ತು ಎಸ್‌ಪಿ 1 ಸ್ಥಾನಗಳನ್ನು ಗೆದ್ದಿದೆ.
ಕಾಂಗ್ರೆಸ್ ಪಕ್ಷ ವೀಕ್ಷಕರನ್ನಾಗಿ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಎ.ಕೆ.ಆ್ಯಂಟನಿ ಅವರನ್ನು ನೇಮಿಸಿದೆ.