ಮಾಯಾವತಿ 
ದೇಶ

ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಗೆ ಬೆಂಬಲ: ಮಾಯಾವತಿ

ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ಉದ್ದೇಶದಿಂದ ಮಧ್ಯ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷ ಸರ್ಕಾರ ರಚಿಸಲು ಬೆಂಬಲ ನೀಡುವುದಾಗಿ ಬಿಎಸ್ ಪಿ ...

ನವದೆಹಲಿ: ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ಉದ್ದೇಶದಿಂದ ಮಧ್ಯ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷ ಸರ್ಕಾರ ರಚಿಸಲು ಬೆಂಬಲ ನೀಡುವುದಾಗಿ ಬಿಎಸ್ ಪಿ ನಾಯಕಿ ಮಾಯಾವತಿ ಹೇಳಿದ್ದಾರೆ.
ಕಾಂಗ್ರೆಸ್ ನ ಹಲವು ನೀತಿಗಳಿಗೆ ನನ್ನ ಸಹಮತವಿಲ್ಲ, ಆದರೂ ಮಧ್ಯಪ್ರದೇಶದಲ್ಲಿ ಸರ್ಕಾರ ರಚಿಸಲು ನಾವು ಬೆಂಬಲ ನೀಡಲು ಒಪ್ಪಿರುವುದಾಗಿ ಹೇಳಿರುವ ಅವರು, ಅವಶ್ಯಕತೆ ಬಿದ್ದರೇ ರಾಜಸ್ತಾನದಲ್ಲೂ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ.
ಮಧ್ಯ ಪ್ರದೇಶದ 230 ವಿಧಾನಸಭೆ ಕ್ಷೇತ್ರಗಳ ಪೈಕಿ ಬಿಎಸ್ ಪಿ ಎರಡು ಕ್ಷೇತ್ರಗಳಲ್ಲಿ ಗೆಲುವು  ಸಾಧಿಸಿದೆ. ಐದು ರಾಜ್ಯಗಳ ಚುನಾವಣಾ ಫಲಿತಾಂಶ ಬಿಜೆಪಿ ವಿರುದ್ಧ ಬಂದಿದೆ ಎಂದು ಹೇಳಿರುವ ಮಾಯಾವತಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ವಿರುದ್ಧ ಹೋರಾಟ ಮಾಡುವುದಾಗಿ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಆಶ್ರಮಕ್ಕೆ ಬರಲು ಹಣ ಪಡೆದ ಕೊಹ್ಲಿ' ಆರೋಪ: ಉಲ್ಟಾ ಹೊಡೆದ Falahari Maharaj, ಕ್ಷಮೆಯಾಚನೆ! video

26 ಸೆಕೆಂಡ್ ನಲ್ಲೇ ಗ್ರೇಟ್ ಎಸ್ಕೇಪ್; ಮೃಗಾಲಯ ವೀಕ್ಷಣೆಗೆ ಬಂದ ಜೋಡಿ, ಗಂಡ ಬೈಕ್ ಪಾರ್ಕ್ ಮಾಡೋ ಗ್ಯಾಪಲ್ಲಿ 'ಲವರ್ ಜೊತೆ ಪತ್ನಿ ಪರಾರಿ'! Video ವೈರಲ್!

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!