ನವದೆಹಲಿ: ವಿವಾದಾತ್ಮಕ ರಫೇಲ್ ಯುದ್ಧ ವಿಮಾನ ಖರೀದಿ ಕುರಿತು ನ್ಯಾಯಾಲಯದ ಉಸ್ತುವಾರಿಯಲ್ಲಿ ತನಿಖೆ ಒಳಪಡಿಸಬೇಕು ಎಂದು ಸಲ್ಲಿಸಲಾಗಿದ್ದ ಎಲ್ಲಾ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದ್ದು, ಇದರಿಂದ ಕೇಂದ್ರದ ಆಡಳಿತಾರೂಢ ಪ್ರಧಾನಿ ಮೋದಿ ಸರ್ಕಾರಕ್ಕೆ ನಿರಾಳಗೊಂಡಂತಾಗಿದೆ.
ಯುದ್ಧ ವಿಮಾನ ಖರೀದಿ ಒಪ್ಪಂದಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ವಕೀಲ ಎಂ.ಎಲ್.ಶರ್ಮಾ ಹಾಗೂ ಎನ್'ಜಿಒ ಅರ್ಜಿಯನ್ನು ಸಲ್ಲಿಸಿತ್ತು. ಈ ಅರ್ಜಿಯನ್ನು ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ನ್ಯಾಯಪೀಠ ತೀರ್ಪು ಕಾಯ್ದಿರಿಸಿತ್ತು.
ಇಂದು ತೀರ್ಪು ಪ್ರಕಟಿಸಿರುವ ನ್ಯಾಯಪೀಠ ತನಿಖೆಗೆ ಅಸಮ್ಮತಿ ಸೂಚಿಸಿದ್ದು, ಎಲ್ಲಾ ಅರ್ಜಿಗಳನ್ನು ತಿರಸ್ಕರಿಸಿದೆ. ವಿಮಾನ ಖರೀದಿ ಪ್ರಕ್ರಿಯೆಯು ನಮಗೆ ತೃಪ್ತಿಯನ್ನು ತಂದಿದೆ. ಒಪ್ಪಂದ ಕುರಿತು ಯಾವುದೇ ರೀತಿಯ ಸಂಶಯಗಳೂ ಮೂಡುತ್ತಿಲ್ಲ. ಯಾವುದೇ ರೀತಿಯ ಸಿದ್ಥತೆಗಳಿಲ್ಲದೆ ಒಂದು ದೇಶ ಇರಲು ಸಾಧ್ಯವಿಲ್ಲ. 126 ಯುದ್ಧ ವಿಮಾನಗಳನ್ನೇ ಖರೀದಿ ಮಾಡುವಂತೆ ಸರ್ಕಾರಕ್ಕೆ ನಾವು ಒತ್ತಾಯ ಮಾಡಲು ಸಾಧ್ಯವಿಲ್ಲ. ಪ್ರತೀಯೊಂದು ಭಾಗದಲ್ಲೂ ಅಂಶಗಳಲ್ಲೂ ನ್ಯಾಯಾಲಯ ಪರಿಶೀಲನೆ ನಡೆಸುವುದು ಸರಿಯಲ್ಲ. ಬೆಲೆ ಹೋಲಿಕೆ ಮಾಡುವುದು ನ್ಯಾಯಾಲಯದ ಕೆಲಸವೂ ಅಲ್ಲ ಎಂದು ಹೇಳಿದೆ.