ಸಚಿನ್ ಪೈಲಟ್ - ಅಶೋಕ್ ಗೆಹ್ಲೋಟ್
ನವದೆಹಲಿ: ರಾಜಸ್ಥಾನ ನೂತನ ಮುಖ್ಯಮಂತ್ರಿ ಗೊಂದಲಕ್ಕೆ ಶುಕ್ರವಾರ ತೆರೆ ಬಿದ್ದಿದ್ದು, ಮುಖ್ಯಮಂತ್ರಿಯಾಗಿ ಅಶೋಕ್ ಗೆಹ್ಲೋಟ್ ಅವರನ್ನು ಹಾಗೂ ಉಪ ಮುಖ್ಯಮಂತ್ರಿಯನ್ನಾಗಿ ಸಚಿನ್ ಪೈಲಟ್ ಅವರನ್ನು ಆಯ್ಕೆ ಮಾಡಲಾಗಿದೆ.
ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮತನಾಡಿದ ರಾಜಸ್ಥಾನ ಉಸ್ತುವಾರಿ ಕೆಸಿ ವೇಣುಗೋಪಾಲ್ ಅವರು, ರಾಜಸ್ಥಾನ ಮುಖ್ಯಮಂತ್ರಿಯಾಗಿ ಅಶೋಕ್ ಗೆಹ್ಲೋಟ್ ಅವರನ್ನು ಹಾಗೂ ಉಪ ಮುಖ್ಯಮಂತ್ರಿಯಾಗಿ ಸಚಿನ್ ಪೈಲಟ್ ಅವರನ್ನು ಆಯ್ಕೆ ಮಾಡಿರುವುದಾಗಿ ತಿಳಿಸಿದರು.
ಅಶೋಕ್ ಗೆಹ್ಲೋಟ್ ಹಾಗೂ ಸಚಿನ್ ಪೈಲಟ್ ನಡುವೆ ಮುಖ್ಯಮಂತ್ರಿ ಗಾದಿಗಾಗಿ ತೀವ್ರ ಪೈಪೋಟಿ ನಡೆದಿತ್ತು. ಅಂತಿಮವಾಗಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಗೆಹ್ಲೋಟ್ ಅವರನ್ನು ಮುಖ್ಯಮಂತ್ರಿ ಮಾಡಿ, ಪೈಲಟ್ ಗೆ ಡಿಸಿಎಂ ಸ್ಥಾನ ನೀಡಿದ್ದಾರೆ.
ರಾಜಸ್ಥಾನ ಮುಖ್ಯಮಂತ್ರಿ ರೇಸ್ ನಲ್ಲಿರುವ ಅಶೋಕ್ ಗೆಹ್ಲೂಟ್ ಹಾಗೂ ಸಚಿನ್ ಪೈಲಟ್ ಅವರೊಂದಿಗೆ ನಿನ್ನೆಯಿಂದ ಹಲವು ಸುತ್ತಿನ ಮಾತುಕತೆ ನಡೆಸಿದ ಬಳಿಕ ರಾಹುಲ್ ಗಾಂಧಿ ಅವರು ಇಂದು ಆ ಇಬ್ಬರು ನಾಯಕರೊಂದಿಗೆ ಇರುವ ಫೋಟೋವೊಂದನ್ನು ಟ್ವೀಟ್ ಮಾಡಿ, 'ಯುನೈಟೆಡ್ ಕಲರ್ಸ್ ಆಫ್ ರಾಜಸ್ಥಾನ್' ಎಂದು ಬರೆದಿದ್ದರು.
ರಾಜಸ್ಥಾನ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆಗಾಗಿ ಕಾಂಗ್ರೆಸ್ ಕಳೆದ 36 ಗಂಟೆಗಳಿಂದ ನಿರಂತರ ಸಭೆಗಳನ್ನು ನಡೆಸಿದೆ. ಈ ಸಭೆಯಲ್ಲಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಕೂಡ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics