ದೇಶ

ಟಿಆರ್ ಎಸ್ ಪಕ್ಷದ ಕಾರ್ಯಾಧ್ಯಕ್ಷರಾಗಿ ಕೆಸಿಆರ್ ಪುತ್ರ ಕೆ.ಟಿ ರಾಮ ರಾವ್ ನೇಮಕ

Shilpa D
ತೆಲಂಗಾಣ: ಇತ್ತೀಚಿಗೆ ನಡೆದ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಟಿಆರ್ ಎಸ್ ವಿಜಯ ಸಾಧಿಸಿದ್ದು, ಸಿಎಂ ಕೆ. ಚಂದ್ರಶೇಖರ್ ರಾವ್ ಅವರ ಪುತ್ರ ತಾರಕ ರಾಮ ರಾವ್ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ರಾಮಾ ರಾವ್ ಅವರನ್ನು ಕೆಟಿಆರ್ ಎಂದು ಕರೆಯಲಾಗುತ್ತದೆ, ಚಂದ್ರಶೇಖರ್ ರಾವ್ ಮುಖ್ಯಮಂತ್ರಿಯಾಗಿ  ಅಧಿಕಾರ ಸ್ವೀಕರಿಸಿದ ನಂತರ ಕಾರ್ಯಕಾರಿ ಅಧ್ಯಕ್ಷರಾಗಿದ್ದ ಕೆಟಿಆರ್ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ಕಾರ್ಯಾಧ್ಯಕ್ಷರನ್ನಾಗಿ ನೇಮಕ ಗೊಂಡ ಮೇಲೆ ಜವಾಬ್ದಾರಿ ಹೆಚ್ಚಿದ್ದು, ಎಲ್ಲಾ ಜಿಲ್ಲೆಗಳ ಅಧ್ಯಕ್ಷರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ಕೆಟಿಆರ್ ನಂಬಿಕಸ್ಥ ವ್ಯಕ್ತಿಯಾಗಿದ್ದು, ಪಕ್ಷ ಮುನ್ನಡೆಸುವತ್ತ ಸಮರ್ಥರಾಗಿದ್ದಾರೆ ಎಂದು ಸಿಎಂ ಕೆಸಿಆರ್ ಕಚೇರಿ ಪತ್ರಿಕಾ ಪ್ರಕಟಣೆ ಹೊರಡಿಸಿದೆ,. ಅವರ ಸಾಮರ್ಥ್ಯವನ್ನು ಪರಿಗಣಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದೆ., ಮೂರು ಬಾರಿ ಶಾಸಕರಾಗಿದ್ದ  ಕೆಟಿಆರ್ ಹಿಂದಿನ ಸರ್ಕಾರದಲ್ಲಿ ಐಟಿ ಸಚಿವರಾಗಿದ್ದರು.
SCROLL FOR NEXT