ಸಂಗ್ರಹ ಚಿತ್ರ 
ದೇಶ

ರಫೇಲ್ ಒಪ್ಪಂದ ಕುರಿತು ತೀವ್ರ ಗದ್ದಲ: ಲೋಕಸಭಾ, ರಾಜ್ಯಸಭಾ ಕಲಾಪ ಡಿ.17ಕ್ಕೆ ಮುಂದೂಡಿಕೆ

ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಕುರಿತಂತೆ ವಿಪಕ್ಷಗಳು ಸದನದ ಬಾವಿಗಿಳಿದು ತೀವ್ರವಾಗಿ ಪ್ರತಿಭಟನೆ ನಡೆಸಿದ ಹಿನ್ನಲೆಯಲ್ಲಿ ಲೋಕಸಭಾ ಹಾಗೂ ರಾಜ್ಯಸಭಾ ಕಲಾಪವನ್ನು ಡಿ.17ಕ್ಕೆ ಮುಂದೂಡಲಾಗಿದೆ ಎಂದು ಶುಕ್ರವಾರ ತಿಳಿದುಬಂದಿದೆ...

ನವದೆಹಲಿ: ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಕುರಿತಂತೆ ವಿಪಕ್ಷಗಳು ಸದನದ ಬಾವಿಗಿಳಿದು ತೀವ್ರವಾಗಿ ಪ್ರತಿಭಟನೆ ನಡೆಸಿದ ಹಿನ್ನಲೆಯಲ್ಲಿ ಲೋಕಸಭಾ, ರಾಜ್ಯಸಭಾ ಕಲಾಪವನ್ನು ಡಿ.17ಕ್ಕೆ ಮುಂದೂಡಲಾಗಿದೆ ಎಂದು ಶುಕ್ರವಾರ ತಿಳಿದುಬಂದಿದೆ. 
ಕಲಾಪ ಆರಂಭವಾಗುತ್ತಿದ್ದಂತೆಯೇ ಆಂಧ್ರಪ್ರದೇಶದ ತೆಲುಗು ದೇಶಂ ಪಕ್ಷ, ಕಾಂಗ್ರೆಸ್ ಸೇರಿ ಹಲವು ವಿರೋಧ ಪಕ್ಷಗಳು ಸದನ ಬಾವಿಗಿಳಿದು ತೀವ್ರವಾಗಿ ಪ್ರತಿಭಟನೆ ನಡೆಸಲು ಆರಂಭಿಸಿದ್ದವು. ಕೆಲ ನಾಯಕರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಲು ಆರಂಭಿಸಿದ್ದರು. 
ಕೆಲ ಕಾಂಗ್ರೆಸ್ ಸದಸ್ಯರು ರಫೇಲ್ ಒಪ್ಪಂದ ಕುರಿತು ಜಂಟಿ ಸಂಸದೀಯ ಸಮಿತಿ ತನಿಖೆ ನಡೆಸಬೇಕೆಂದು ಆಗ್ರಹಿಸಿದರು. ಈ ನಡುವೆ ಎಐಎಡಿಎಂಕೆ ಸದಸ್ಯರು ಕಾವೇರಿ ನದಿ ನೀರು ಹಂಚಿಕೆ ವಿವಾದ ಕುರಿತಂತೆ ಪ್ರತಿಭಟನೆ ನಡೆಸಲು ಆರಂಭಿಸಿದ್ದರು. ಇನ್ನು ಟಿಡಿಪಿ ಸದಸ್ಯರು ಆಂಧ್ರಪ್ರದೇಶ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡುವ ಕುರಿತು ಪ್ರತಿಭಟನೆ ನಡೆಸುತ್ತಿದ್ದರು. 
ಬಳಿಕ ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವ ನರೇಂದ್ರ ಸಿಂಗ್ ತೋಮರ್ ಅವರು, ರಫೇಲ್ ಒಪ್ಪಂದ ಕುರಿತಂತೆ ಸುಪ್ರೀಂಕೋರ್ಟ್ ತೀರ್ಪನ್ನು ನೀಡಿದೆ. ಇದೀಗ ಕಾಂಗ್ರೆಸ್ ದೇಶವನ್ನು ತಪ್ಪು ಹಾದಿಗೆಳೆದ ಕಾರಣಕ್ಕೆ ಕ್ಷಮೆಯಾಚಿಸಬೇಕೆಂದು ಹೇಳಿದರು. 
ನಂತರ ಮಾತನಾಡಿದ ಗೃಹ ಸಚಿವ ರಾಜನಾಥ್ ಸಿಂಗ್ ಅವರು, ಕಾಂಗ್ರೆಸ್ ಅಧ್ಯಕ್ಷ ತಮ್ಮ ರಾಜಕೀಯ ಲಾಭಕ್ಕಾಗಿ ಸಾರ್ವಜನಿಕರನ್ನು ತಪ್ಪು ಹಾದಿಗೆಳೆಯುತ್ತಿದ್ದಾರೆ. ಭಾರತದ ವರ್ಚಸ್ಸನ್ನು ಜಾಗತಿಕವಾಗಿ ನಾಶ ಮಾಡುತ್ತಿದ್ದಾರೆ. ಮೊದಲು ಸದನಕ್ಕೆ ಹಾಗೂ ದೇಶದ ಜನತೆಗೆ ರಾಹುಲ್ ಕ್ಷಮೆಯಾಚಿಸಬೇಕೆಂದು ಹೇಳಿದರು. 
ಬಳಿಕ ಬಿಜೆಪಿ ನಾಯಕರೂ ಕೂಡ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಕ್ಷಮೆಯಾಚಿಸಬೇಕೆಂದು ಪಟ್ಟು ಹಿಡಿದರು. ಸದನದಲ್ಲಿ ತೀವ್ರ ಗದ್ದಲವುಂಟಾದ ಹಿನ್ನಲೆಯಲ್ಲಿ ಲೋಕಸಭಾ ಕಲಾಪವನ್ನು ಸ್ಪೀಕರ್ ಡಿ.17ಕ್ಕೆ ಮುಂದೂಡಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!