ನರೇಂದ್ರ ಮೋದಿ 
ದೇಶ

ಮೋದಿ ವಿದೇಶ ಪ್ರವಾಸ, ಜಾಹೀರಾತಿಗಾಗಿ 7200 ಕೋಟಿ ರು. ಖರ್ಚು

ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ನಾಲ್ಕುವರೆ ವರ್ಷಗಳಲ್ಲಿ ತಮ್ಮ ವಿದೇಶ ಪ್ರವಾಸ ಹಾಗೂ ಜಾಹೀರಾತಿಗಾಗಿ ಬರೋಬ್ಬರಿ....

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ನಾಲ್ಕುವರೆ ವರ್ಷಗಳಲ್ಲಿ ತಮ್ಮ ವಿದೇಶ ಪ್ರವಾಸ ಹಾಗೂ ಜಾಹೀರಾತಿಗಾಗಿ ಬರೋಬ್ಬರಿ 7200 ಕೋಟಿ ರುಪಾಯಿ ಖರ್ಚು ಮಾಡಿದ್ದಾರೆ ಎಂದು ಸ್ವತಃ ಕೇಂದ್ರ ಸರ್ಕಾರ ಶುಕ್ರವಾರ ಬಹಿರಂಗಪಡಿಸಿದೆ.
ಮೋದಿ ಅವರು 2014ರಲ್ಲಿ ಪ್ರಧಾನಿಯಾದ ನಂತರ ಇದುವರೆಗೆ 84 ಬಾರಿ ವಿದೇಶ ಪ್ರವಾಸ ಕೈಗೊಂಡಿದ್ದು, ಅದಕ್ಕಾಗಿ 2 ಸಾವಿರ ಕೋಟಿ ರುಪಾಯಿ ಖರ್ಚು ಮಾಡಿದ್ದಾರೆ ಎಂದು ವಿದೇಶಾಂಗ ಖಾತೆ ರಾಜ್ಯ ಸಚಿವ ವಿ.ಕೆ.ಸಿಂಗ್ ಅವರು ಇಂದು ಲೋಕಸಭೆಗೆ ಮಾಹಿತಿ ನೀಡಿದ್ದಾರೆ.
ಏರ್ ಕ್ರಾಫ್ಟ್ ನಿರ್ವಹಣೆಗೆಂದೇ 1583.18 ಕೋಟಿ, ಚಾರ್ಟರ್ಡ್ ಫ್ಲೈಟ್ಸ್‌ಗಳಿಗಾಗಿ 429.28 ಕೋಟಿ, ಸುರಕ್ಷಿತ ಹಾಟ್‌ಲೈನ್ ಸೌಲಭ್ಯಕ್ಕಾಗಿ 9.12 ಕೋಟಿ ರೂ. [2014-2017] ಖರ್ಚು ಮಾಡಲಾಗಿದೆ ಎಂದು ವಿ.ಕೆ.ಸಿಂಗ್ ಅವರು ಲೆಕ್ಕ ನೀಡಿದ್ದಾರೆ.  
ಇನ್ನು ಮೋದಿ ಅವರ ಯೋಜನೆಗಳು ಹಾಗೂ ಸಾಧನೆಗಳ ಪ್ರಚಾರಕ್ಕಾಗಿ ಕೇಂದ್ರ ಸರ್ಕಾರವು 2014–15ರಿಂದ ಇದುವರೆಗೆ ಮಾಧ್ಯಮ ಜಾಹೀರಾತಿಗಾಗಿ 5200 ಕೋಟಿಗಿಂತಲೂ ಹೆಚ್ಚು ಖರ್ಚು ಮಾಡಿದೆ ಎಂದು ವಾರ್ತಾ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ರಾಜ್ಯವರ್ಧನ್ ರಾಠೋಡ್ ಅವರು ಹೇಳಿದ್ದಾರೆ.
ಮೋದಿ ಜಾಹೀರಾತಿಗಾಗಿ 2014-15ರಲ್ಲಿ 979 ಕೋಟಿ, 2015-16ರಲ್ಲಿ 1,160 ಕೋಟಿ, 2016-17ರಲ್ಲಿ 1,264 ಕೋಟಿ, 2017-18ರಲ್ಲಿ 1,313 ಕೋಟಿ ಹಾಗೂ 2018-19ರಲ್ಲಿ 527 ಕೋಟಿ ರುಪಾಯಿ ಖರ್ಚು ಮಾಡಲಾಗಿದೆ ಎಂದು ರಾಠೋಡ್ ಅವರು ಲೋಕಸಭೆಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾ ತತ್ತರ: ನೆರವು ನೀಡುವ ವಿಮಾನಗಳಿಗೆ ಅನುಮತಿ ವಿಳಂಬ, ಪಾಕ್ ಆರೋಪದ ವಿರುದ್ಧ ಭಾರತ ತೀವ್ರ ಕಿಡಿ

ಕುಡುಕರಿಗೊಬ್ಬ, ಬ್ಯಾಚುಲರ್‌ಗಳಿಗೆ ಮತ್ತೊಬ್ಬ ದೇವರು: ಹಿಂದೂಗಳಲ್ಲಿ ಎಷ್ಟು ದೇವರಿದ್ದಾರೆ: 3 ಕೋಟಿ ಇದ್ದಾರಾ? ವಿವಾದವೆಬ್ಬಿಸಿದ ರೇವಂತ್ ರೆಡ್ಡಿ ಹೇಳಿಕೆ

ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ಕಬ್ಬಿನ ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿ; ಸ್ಥಳದಲ್ಲೇ ನಾಲ್ವರು ಯುವಕರ ದುರ್ಮರಣ

Imran Khan ಸಾವಿನ ಊಹಾಪೋಹ ನಡುವೆ ಜೈಲಿನಲ್ಲಿ ಮಾಜಿ ಪ್ರಧಾನಿ ಭೇಟಿಯಾಗಿ ಬಂದ ಸಹೋದರಿ ಉಜ್ಮಾ ಖಾನಮ್ ಹೇಳಿದ್ದೇನು?

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಇದ್ದ ವೇದಿಕೆಗೆ ನುಗ್ಗಿದ ಆಗಂತುಕ!

SCROLL FOR NEXT