ರಿಲಯನ್ಸ್ ವಿರುದ್ಧದ ಆರೋಪ ರಾಜಕೀಯ ಪ್ರೇರಿತವೆನ್ನುವುದು ಈ ತೀರ್ಪಿನಿಂದ ಸಾಬೀತು: ಅನಿಲ್ ಅಂಬಾನಿ
ರಿಲಯನ್ಸ್ ಸಂಸ್ಥೆ ಮುಖ್ಯಸ್ಥ ಅನಿಲ್ ಅಂಬಾನಿ ರಾಫೆಲ್ ಒಪ್ಪಂದ ಕುರಿತ ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸಿದ್ದಾರೆ.
ನವದೆಹಲಿ: ರಿಲಯನ್ಸ್ ಸಂಸ್ಥೆ ಮುಖ್ಯಸ್ಥ ಅನಿಲ್ ಅಂಬಾನಿ ರಾಫೆಲ್ ಒಪ್ಪಂದ ಕುರಿತ ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸಿದ್ದಾರೆ.
ತಮ್ಮ ಸಂಸ್ಥೆಯ ವಿರುದ್ಧ ರಾಜಕೀಯ ಪ್ರೇರಿತ ಆರೋಪ ಮಾಡಲಾಗಿತ್ತು ಎಂದ ಅನಿಲ್ ಅಂಬಾನಿ ತಮ್ಮ ಸಂಸ್ಥೆ ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ಬದ್ದವಾಗಿದೆ ಎಂದು ಹೇಳಿದ್ದಾರೆ.
ರಾಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ಸಂಬಂಧ ತನಿಖೆ ಕೈಗೊಳ್ಳಬೇಕೆಂದು ಆಗ್ರಹಿಸಿ ಸುಪ್ರೀಂ ಕೋರ್ಟ್ ಗೆ ಸಲಿಕೆಯಾಗಿದ್ದ ಅರ್ಕಿಯನ್ನು ಇಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ನ್ಯಾಯಪೀಠ ವಿಚಾರಣೆ ನಡೆಸಿದ್ದು ಒಪ್ಪಂದದ ಕುರಿತಂತೆ ತನಿಖೆಗೆ "ನೋ" ಎಂದಿದೆ.
ದೇಶಕ್ಕೆ ಯುದ್ಧ ವಿಮಾನಗಳ ಅಗತ್ಯವಿದೆ. ಹೀಗಾಗಿ ಜೆಟ್ ವಿಮಾನಗಳಿಲ್ಲದೆ ದೇಶದ ರಕ್ಷಣೆ ಸಾಧ್ಯವಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ಮೂರು ನ್ಯಾಯಾಧೀಶರ ಪೀಠ ಈ ತೀರ್ಪು ನೀಡಿದ್ದು ಫೈಟರ್ ಜೆಟ್ ಗಳ ಖರೀದಿ ಸಂಬಂಧ ಮಧ್ಯಪ್ರವೇಶಕ್ಕೆ ಯಾವ ಕಾರಣವಿಲ್ಲ ಎಂದು ಹೇಳಿತ್ತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.