ದೇಶ

ಮಧ್ಯಪ್ರದೇಶದಲ್ಲಿ ಬಿಜೆಪಿ-ಕಾಂಗ್ರೆಸ್ ಘಟಾನುಘಟಿ ನಾಯಕರುಗಳ ಸೋಲಿಗೆ ಆಡಳಿತ ವಿರೋಧಿ ಅಲೆ ಕಾರಣ?

Shilpa D
ಭೂಪಾಲ್: ಇತ್ತೀಚೆಗೆ ನಡೆದ ಮಧ್ಯಪ್ರದೇಶ ಮತ್ತು ರಾಜಸ್ತಾನ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ಎರಡು ಪಕ್ಷಗಳ ಪ್ರತ್ಯೇಕ ಅಭ್ಯರ್ಥಿಗಳು, ಕೆಲವು ಸಚಿವರುಗಳ ವಿರುದ್ಧದ ಆಡಳಿತ ವಿರೋಧಿ ಅಲೆಯ ಸೋಲಿಗೆ ಪ್ರಮುಖ ಕಾರಣ ಎಂದು ಹೇಳಲಾಗುತ್ತಿದೆ.
ಮಧ್ಯಪ್ರದೇಶದಲ್ಲಿ ಶಿವರಾಜ್ ಸಿಂಗ್ ಚೌಹಾಣ್ ಸಂಪುಟದ 13 ಸಚಿವರು ಚುನವಾಣೆಯಲ್ಲಿ ಪರಾಭವಗೊಂಡಿದ್ದಾರೆ. ಜೊತೆಗೆ ಕಾಂಗ್ರೆಸ್ ಕೆಲವು ಘಟಾನುಘಟಿಗಳು ಕೂಡ ಸೋತಿದ್ದಾರೆ.
ಅವರ ವಿರುದ್ಧದ ಆಡಳಿತ ವಿರೋಧಿ ಅಲೆ ಅವರ ಕ್ಷೇತ್ರದ ಮಟ್ಟದಲ್ಲಿ ಹೆಚ್ಚು ಇದ್ದ ಪರಿಣಾಮ ಸೋಲಿಗೆ ಕಾರಣವಾಗಿದೆ.
ಎರಡೂ ಪಕ್ಷಗಳು ಸರಳ ಬಹುಮತದ ಅಂಚಿಗೆ ತಲುಪಿವೆ, ಆದರೆ 2 ರಾಷ್ಟ್ರೀಯ ಪಕ್ಷಗಳಿಗೆ ಬಹುಮತ ದೊರೆತಿಲ್ಲ, ಅಭ್ಯರ್ಥಿಗಳ ವಿರುಧ್ದದ ಆಡಳಿತ ವಿರೋಧಿ ಅಲೆ ಜೊತೆಗೆ ಟಿಕೆಟ್ ಸಿಗದೇ ಬಂಡಾಯವಾಗಿ ಸ್ಪರ್ಧಿಸಿದ್ದ ಅಭ್ಯರ್ಥಿಗಳಿಂದ ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಡ್ಯಾಮೇಜ್ ಆಗಿದೆ. 
ಕಾಂಗ್ರೆಸ್ ನಿಂದ ನಾಲ್ವರು ಬಂಡಾಯ ಅಭ್ಯರ್ಥಿಗಳು ಸ್ವತಂತ್ರ್ಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಬಿಜೆಪಿ ಅಭ್ಯರ್ಥಿಗಳ ವಿರುದ್ದ ಗೆಲುವು ಸಾಧಿಸಿದ್ದಾರೆ.
SCROLL FOR NEXT