ದೇಶ

ನಾಳೆ ಕರುಣಾನಿಧಿ ಪ್ರತಿಮೆ ಅನಾವರಣ: ಪ್ರತಿಪಕ್ಷಗಳಿಂದ ಶಕ್ತಿ ಪ್ರದರ್ಶನ

Lingaraj Badiger
ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ಮಾಜಿ ಮುಖ್ಯಸ್ಥ ದಿವಂಗತ ಎಂ.ಕರುಣಾನಿಧಿ ಅವರ ಪ್ರತಿಮೆಯನ್ನು ಭಾನುವಾರ ಅನಾವರಣಗೊಳಿಸಲಾಗುತ್ತಿದ್ದು, ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿದಂತೆ ಹಲವು ರಾಷ್ಟ್ರಮಟ್ಟದ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಬಿಜೆಪಿ ನೇತೃತ್ವದ ಎನ್ ಡಿಎ ವಿರುದ್ಧ ಶಕ್ತಿ ಪ್ರದರ್ಶನ ಮಾಡಲಿದ್ದಾರೆ.
ಡಿಎಂಕೆ ಪಕ್ಷದ ಕಚೇರಿ ಮುಂಭಾಗದಲ್ಲಿರುವ  ಡಿಎಂಕೆ ಸಂಸ್ಥಾಪಕ ಸಿಎನ್ ಅಣ್ಣಾದೊರೈ ಅವರ ಪ್ರತಿಮೆ ಪಕ್ಕದಲ್ಲೇ ಕರುಣಾನಿಧಿ ಅವರ ಕಂಚಿನ ಪ್ರತಿಮೆ ನಿರ್ಮಿಸಲಾಗಿದ್ದು, ಅದನ್ನು ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್ ಅವರ ಉಪಸ್ಥಿತಿಯಲ್ಲಿ  ಸೋನಿಯಾ ಗಾಂಧಿ ಅವರು ನಾಳೆ ಅನಾವರಣಗೊಳಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು, ಕೇರಳ ಮುಖ್ಯಮಂತ್ರಿ ಪಿಣರಾಜ್ಯ ವಿಜಯನ್, ಪುದುಚೇರಿ ಮುಖ್ಯಮಂತ್ರಿ ವಿ ನಾರಾಯಣಸ್ವಾಮಿ ಹಾಗೂ ಸಿಪಿಐ, ಸಿಪಿಐಎಂ, ಎಂಎಂಕೆ ಸೇರಿದಂತೆ ಹಲವು ಪಕ್ಷಗಳ ನಾಯಕರು ಭಾಗವಹಿಸಲಿದ್ದಾರೆ.
ಪ್ರತಿಮೆ ಅನಾವರಣಗೊಳಿಸಿದ ಬಳಿಕ ವೈಎಂಸಿಎ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆ ಆಯೋಜಿಸಲಾಗಿದ್ದು, ಇಲ್ಲಿ ಪ್ರತಿಪಕ್ಷಗಳ ನಾಯಕರು ಒಗ್ಗಟ್ಟು ಪ್ರದರ್ಶಿಸುವ ಮೂಲಕ ಉದ್ದೇಶಿತ ಮಹಾಮೈತ್ರಿಗೆ ಒಂದು ಆಕಾರ ನೀಡುವ ಸಾಧ್ಯತೆ ಇದೆ.
SCROLL FOR NEXT