ಮೇಘಾಲಯ: ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದ ವ್ಯಕ್ತಿಯ ಬಂಧನ!
ಮೇಘಾಲಯ: ಮೇಘಾಲಯದಲ್ಲಿ ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಸ್ಥಳದಲ್ಲಿದ್ದ 13 ಗಣಿಗಾರರನ್ನು ಸುರಕ್ಷಿತವಾಗಿ ಕರೆತರಲು ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಅಕ್ರಮವಾಗಿ ಗಣಿಗಾರಿಕೆಯಲ್ಲಿ ತೊಡಗಿದ್ದ ವ್ಯಕ್ತಿಯನ್ನು ನಾರ್ಮನ್ ಗ್ರಾಮದಲ್ಲಿ ಬಂಧಿಸಲಾಗಿದ್ದು, ಬಂಧಿತ ವ್ಯಕ್ತಿಯನ್ನು ಕ್ರಿಪ್ ಚುಲೆಟ್ ಎಂದು ಗುರುತಿಸಲಾಗಿದೆ. ಸಾರ್ವಜನಿಕ ಆಸ್ತಿ ಹಾನಿ ತಡೆ ಕಾಯ್ದೆಯ ಅಡಿ ಹಾಗೂ ನಿರ್ಲಕ್ಷ್ಯದ ಕಾರಣದಿಂದಾಗಿ ಹಲವರ ಸಾವಿಗೆ ಕಾರಣವಾಗಿದ್ದ ಪ್ರಕರಣದಲ್ಲಿ ಕ್ರಿಪ್ ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಅಕ್ರಮ ಕಲ್ಲಿದ್ದಲು ಗಣಿಗಾರಿಕೆಯಲ್ಲಿ ತೊಡಗಿದ್ದ ಕ್ರಿಪ್, ಕಾರ್ಮಿಕರನ್ನು ನೇಮಕ ಮಾಡಿಕೊಂಡಿದ್ದ ಹಾಗೂ 370 ಅಡಿ ಕೆಳಗೆ ವರ್ಟಿಕಲ್ ಶಾಫ್ಟ್ ನಲ್ಲಿ ಕೆಲಸ ಮಾಡಿಸುತ್ತಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಕಾರ್ಮಿಕರನ್ನು ರಕ್ಷಣೆ ಮಾಡಲಾಗುತ್ತಿದ್ದು, ರಕ್ಷಣಾ ಕಾರ್ಯ ಮುಂದುವರೆದಿದೆ.