ಸಾಂದರ್ಭಿಕ ಚಿತ್ರ 
ದೇಶ

ಅಪ್ರಾಪ್ತೆ ಮೇಲೆ ಅತ್ಯಾಚಾರ: ಬಿಹಾರ ಆರ್ ಜೆಡಿ ಶಾಸಕನಿಗೆ ಶಿಕ್ಷೆ ವಿಧಿಸಿದ ಕೋರ್ಟ್

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ರಾಷ್ಟ್ರೀಯ ಜನತಾ ದಳ (ಆರ್ ಜೆಡಿ) ಶಾಸಕ ರಾಜ್ ಬಲ್ಲಭ್ ಯಾದವ್ ತಪಿತಸ್ಥ ಎಂದು ಕೋರ್ಟ್ ಆದೇಶಿಸಿದೆ....

ಪಾಟ್ನಾ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ರಾಷ್ಟ್ರೀಯ ಜನತಾ ದಳ (ಆರ್ ಜೆಡಿ) ಶಾಸಕ ರಾಜ್ ಬಲ್ಲಭ್ ಯಾದವ್ ತಪಿತಸ್ಥ ಎಂದು ಕೋರ್ಟ್ ಆದೇಶಿಸಿದೆ.
ನ್ಯಾಯಾಲದ ವಿಶೇಷ ನ್ಯಾಯಾಧೀಶ ಪರಶುರಾಮ ಯಾದವ್ ಅವರು ಕೂಲಂಕುಶವಾಗಿ ಪರಿಶೀಲಿಸಿದ್ದು, ಆರ್ ಜೆಡಿ ಶಾಸಕ ರಾಜ್ ಬಲ್ಲಭ್ ಒಳಗೊಂಡಂತೆ ಇತರೆ ಐವರನ್ನು ಅಪರಾಧಿಗಳು ಎಂದು ಹೇಳಿ ಆದೇಶ ಹೊರಡಿಸಿದ್ದಾರೆ,
ಇನ್ನು ಈ ಪ್ರಕರಣದ ಅಪರಾಧಿಗಳಿಗೆ ಶಿಕ್ಷೆ ಪ್ರಮಾಣವನ್ನು ಇನ್ನು ಪ್ರಕಟಿಸಿಲ್ಲ. 2016 ಫೆಬ್ರವರಿ 6ರಂದು ಮನೆಯಿಂದ ಹೊರಕ್ಕೆ ಹೋಗಿದ್ದ ಬಾಲಕಿ ನಾಪತ್ತೆಯಾಗಿದ್ದಳು. ಆಕೆಯನ್ನು ಅಪಹರಿಸಿ ಶಾಸಕರ ಬಳಿಗೆ ಕರೆದುಕೊಂಡು ಬಂದು  ಮದ್ಯಪಾನ ಮಾಡಿಸಿ ಅತ್ಯಾಚಾರ ಮಾಡಿದ್ದರು.
ಘಟನೆಯಿಂದ ಆಘಾತಕ್ಕೊಳಗಾಗಿದ್ದ ಬಾಲಕಿ ಚೇತರಿಸಿಕೊಂಡು ಮನೆಯವರಿಗೆ ವಿಷಯ ತಿಳಿಸಿದ್ದಳು. ಬಳಿಕ ಫೆಬ್ರವರಿ 09ರಂದು ನಲಂದಾ ಪೊಲೀಸರು ಐಪಿಸಿ ಸೆಕ್ಷನ್ 164ರ ಅನ್ವಯ ಪ್ರಕರಣ ದಾಖಲಿಸಿಕೊಂಡು ಎಫ್ ಐಆರ್ ಹಾಕಿದ್ದರು.
ಘಟನೆ ಬಗ್ಗೆ  ಎಫ್ ಐಆರ್ ವರದಿಗಳು ಬರುತ್ತಿದ್ದಂತೆ ತಕ್ಷಣವೇ ಶಾಸಕ ರಾಜ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿತ್ತು, ನವಾಡ ಕ್ಷೇತ್ರದ ಶಾಸಕ ರಾಜ್ ಅವರು ಈ ಹಿಂದೆ ಆರ್ ಜೆಡಿ ಸರ್ಕಾರದಲ್ಲಿ ಸಚಿವರಾಗಿ ಕೂಡಾ ಕಾರ್ಯನಿರ್ವಹಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT