ಚೆನ್ನೈ: 2019ರ ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ವಿಪಕ್ಷಗಳೆಲ್ಲಾ ಒಟ್ಟಾಗುತ್ತಿದ್ದು ಇದೀಗ ಡಿಎಂಕೆ ನಾಯಕ ಎಂಕೆ ಸ್ಟಾಲಿನ್ ಅವರು ಪ್ರಧಾನಿ ಮೋದಿಗೆ ಸೆಡ್ಡು ಹೊಡೆಯಲು ನಮಗೆ ಸೂಕ್ತ ಪ್ರಧಾನಿ ಅಭ್ಯರ್ಥಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಎಂದು ಹೇಳಿದ್ದಾರೆ.
ದ್ರಾವಿಡ ಮುನ್ನೇತ್ರ ಕಳಗಂ(ಡಿಎಂಕೆ) ನಾಯಕ ಕರುಣಾನಿಧಿ ಅವರ ಪ್ರತಿಮೆಯನ್ನು ಚೆನ್ನೈನ ಡಿಎಂಕೆ ಪ್ರಧಾನ ಕಚೇರಿಯ ಮುಂಭಾಗ ಅನಾವರಣ ಮಾಡಲಾಗಿದ್ದು ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ನಟ ಮತ್ತು ರಾಜಕಾರಣಿ ರಜನಿಕಾಂತ್, ಶತ್ರುಘ್ನ ಸಿನ್ಹ, ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಸಿಎಂ ಮಮತಾ ಬ್ಯಾನರ್ಜಿ ಆಗಮಿಸಿ ತಮ್ಮ ಒಗ್ಗಟ್ಟನ್ನು ಪ್ರದರ್ಶಿಸಿದರು.
ಇದೇ ವೇಳೆ ಮಾತನಾಡಿದ ಎಂಕೆ ಸ್ಟಾಲಿನ್, ಪ್ರತಿಮೆ ಅನಾವರಣ ಕಾರ್ಯಕ್ರಮವು ವಿಪಕ್ಷಗಳ ಒಗ್ಗೂಡುವಿಕೆಗೆ ಸಾಕ್ಷಿಯಾಗಿದೆ. ಇಂದಿನ ಕಾರ್ಯಕ್ರಮದ ಮೂಲದ ಮುಂದಿನ ವಕ್ಷ ನಡೆಯಲಿರುವ ಲೋಕಸಭಾ ಚುನಾವಣೆಗೆ ಪ್ರಧಾನಿ ಮೋದಿ ವಿರುದ್ಧ ಸ್ಪರ್ಧಿಸಲು ರಾಹುಲ್ ಗಾಂಧಿ ಸೂಕ್ತ ವ್ಯಕ್ತಿ ಎಂದು ಘೋಷಿಸುತ್ತಿದ್ದೇನೆ ಎಂದರು.
ಇನ್ನು ಸಿಎಂ ಚಂದ್ರಬಾಬು ನಾಯ್ಡು ಅವರು ಮಾತನಾಡಿ, ಬಿಜೆಪಿ ಕೇಂದ್ರದ ಸಿಬಿಐ, ಆರ್ಬಿಐ ನಂತಹ ಸಂಸ್ಧೆಗಳ ಕಾರ್ಯದಲ್ಲಿ ಹಸ್ತಕ್ಷೇಪ ಮಾಡಿದ್ದು ಅವಕ್ಕೆ ಹಾನಿಯೆಸಗಿದೆ ಎಂದು ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics