ದೇಶ

ಸಜ್ಜನ್ ಕುಮಾರ್ ಶಿಕ್ಷೆಗೆ ಸ್ವಾಗತ, ಆದರೆ ಸಿಖ್ ಹತ್ಯಾಕಾಂಡದಲ್ಲಿ ಕಾಂಗ್ರೆಸ್ ಕೈವಾಡವಿಲ್ಲ: ಅಮರಿಂದರ್ ಸಿಂಗ್

Srinivas Rao BV
ಪಂಜಾಬ್: 1984ರ ಸಿಖ್​ ವಿರೋಧಿ ದಂಗೆ ಪ್ರಕರಣಕ್ಕೆ ಸಂಬಂಧಿಸಿದಂತೆ 34 ವರ್ಷಗಳ ಬಳಿಕ ಕಾಂಗ್ರೆಸ್ ಮುಖಂಡ ಸಜ್ಜನ್ ಕುಮಾರ್ ಗೆ ಶಿಕ್ಷೆ ವಿಧಿಸಿರುವುದನ್ನು ಕಾಂಗ್ರೆಸ್ ನ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಸ್ವಾಗತಿಸಿದ್ದಾರೆ. 
ಪಂಜಾಬ್ ಮುಖ್ಯಮಂತ್ರಿಗಳ ಕಚೇರಿಯಿಂದ ಬಿಡುಗಡೆ ಮಾಡಲಾದ ಪತ್ರದಲ್ಲಿ ಸಜ್ಜನ್ ಕುಮಾರ್ ದೋಷಿ ಎಂದು ಸಾಬೀತಾಗಿರುವ ತೀರ್ಪಿನ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಮರಿಂದರ್ ಸಿಂಗ್, ತೀರ್ಪನ್ನು ಸ್ವಾಗತಿಸುತ್ತೇವೆ ಆದರೆ ಇಂದಿರಾ ಗಾಂಧಿ ಹತ್ಯೆಯ ನಂತರ ನಡೆದ ಸಿಖ್ ವಿರೊಧಿ ದಂಗೆಯಲ್ಲಿ ಕಾಂಗ್ರೆಸ್ ನ ಕೈವಾಡವಿರಲಿಲ್ಲ ಎಂದು ಅಮರಿಂದರ್ ಸಿಂಗ್ ಹೇಳಿದ್ದಾರೆ. 
ಸಿಖ್ ವಿರೋಧಿ ದಂಗೆಯಲ್ಲಿ ಕಾಂಗ್ರೆಸ್ ನದ್ದಾಗಲಿ ಅಥವಾ ಗಾಂಧಿ ಕುಟುಂಬದ್ದಾಗಲೀ ಪಾತ್ರವಿರಲಿಲ್ಲ. ಆದರೆ ಬಿಜೆಪಿ ಹಾಗೂ ಶಿರೋಮಣಿ ಅಖಾಲಿದಳದವರು ಗಾಂಧಿ ಕುಟುಂಬದ ಹೆಸರನ್ನು ಎಳೆದು ತಂದು ರಾಜಕೀಯ ಮಾಡುತ್ತಿದ್ದಾರೆ ಎಂದು ಅಮರಿಂದರ್ ಸಿಂಗ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 
SCROLL FOR NEXT