ರಾಜಸ್ಥಾನ ಸಿಎಂ ಗೆಹ್ಲೋಟ್, ಡೆಪ್ಯುಟಿ ಸಿಎಂ ಸಚಿನ್ ಪೈಲಟ್ ಪ್ರಮಾಣ ವಚನ ಸ್ವೀಕಾರ 
ದೇಶ

ರಾಜಸ್ಥಾನ ಸಿಎಂ ಗೆಹ್ಲೋಟ್, ಡೆಪ್ಯುಟಿ ಸಿಎಂ ಸಚಿನ್ ಪೈಲಟ್ ಪ್ರಮಾಣ ವಚನ ಸ್ವೀಕಾರ

ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಅಶೋಕ್ ಗೆಹ್ಲೋಟ್ ಹಾಗೂ ಉಪ ಮುಖ್ಯಮಂತ್ರಿಯಾಗಿ ಸಚಿನ್ ಪೈಲಟ್ ಅವರು ಸೋಮವಾರ ಬೆಳಿಗ್ಗೆ ಪ್ರಮಾಣ ವಚನ ಸ್ವೀಕಾರ ಮಾಡಿದರು...

ಜೈಪುರ: ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಅಶೋಕ್ ಗೆಹ್ಲೋಟ್ ಹಾಗೂ ಉಪ ಮುಖ್ಯಮಂತ್ರಿಯಾಗಿ ಸಚಿನ್ ಪೈಲಟ್ ಅವರು ಸೋಮವಾರ ಬೆಳಿಗ್ಗೆ ಪ್ರಮಾಣ ವಚನ ಸ್ವೀಕಾರ ಮಾಡಿದರು. 
ರಾಜಸ್ಥಾನ ರಾಜಧಾನಿ ಜೈಪುರದ ಆಲ್ಬರ್ಟ್ ಹಾಲ್ ನಲ್ಲಿ ಕಾರ್ಯಕ್ರಮ ನಡೆಯುತ್ತಿದ್ದು, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರ ಪ್ರಸ್ತುತತೆಯಲ್ಲಿ ಅಶೋಕ್ ಗೆಹ್ಲೋಟ್ ಹಾಗೂ ಸಚಿನ್ ಪೈಲಕಟ್ ಅವರಿಗೆ ರಾಜ್ಯಪಾಲ ಕಲ್ಯಾಣ್ ಸಿಂಗ್ ಅವರು ಪ್ರಮಾಣವಚನ ಬೋಧಿಸಿದರು. 
ಕಳೆದ ಡಿ.11 ರಂದು ಕಾಂಗ್ರೆಸ್ ಪಕ್ಷ 199 ಸದಸ್ಯ ಬಲದ ರಾಜಸ್ಥಾನ ವಿಧಾನಸಭೆಯ 99 ಸ್ಥಾನಗಳನ್ನು ಗೆದ್ದು ಏಕೈಕ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. 
ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಎನ್'ಸಿಪಿ ಮುಖ್ಯಸ್ಥ ಶರದ್ ಯಾದವ್, ಎಲ್'ಜೆಡಿ ನಾಯಕ ಶರದ್ ಯಾದವ್, ಜಮ್ಮು ಮತ್ತು ಕಾಶ್ಮೀರದ ಮುಖ್ಯಸ್ಥ ಫಾರೂಖ್ ಅಬ್ದುಲ್ಲಾ, ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಆರ್'ಜೆಡಿ ನಾಯಕ ತೇಜಸ್ವಿ ಯಾದವ್, ಡಿಎಂಕೆ ನಾಯಕ ಎಂ.ಕೆ.ಸ್ಟಾಲಿನ್, ಜೆಎಂಎಂ ನಾಯಕ ಹೇಮಂತ್ ಸೊರೆನ್, ಡೆವಿಎಂ ನಾಯಕ ಬಾಬುಲಾಲ್ ಮರಂಡಿ ಹಾಜರಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Chalo Supreme Court: ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯಕಾಂತ್; ಸುಪ್ರೀಂ ಕೋರ್ಟ್‌ನತ್ತ ಇಂಡಿಯಾ ಬ್ಲಾಕ್ ಮೆರವಣಿಗೆ!

ಯುವತಿ ಮೇಲೆ ಅತ್ಯಾಚಾರ ಆರೋಪ: ಹುಣಸಮಾರನಹಳ್ಳಿ ಮಠದ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ

ಚುನಾವಣೆ ಘೋಷಣೆಯಾದ್ರೆ 25 ಕಾಂಗ್ರೆಸ್‌ ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ ಹೊಸ ಬಾಂಬ್‌

KPSC ನೇಮಕಾತಿ ಹಗರಣದ ಕಿಂಗ್‌ಪಿನ್ ಬಸವರಾಜ್ ಕನ್ನಾಳೆಗೆ 5 ದಿನ ಜಾಮೀನು ಮಂಜೂರು; ಇಲ್ಲಿದೆ ಕಾರಣ...

ರಸ್ತೆ ಮಧ್ಯೆ ನಮಾಜ್ ಮಾಡುತ್ತಿದ್ದ ಪಾಕ್‌ ಮೂಲದ ವಿದ್ಯಾರ್ಥಿನಿಗೆ ಕಾರು ಢಿಕ್ಕಿ, ಸಾವು; ಚಾಲಕನಿಗೆ ಜೈಲು ಶಿಕ್ಷೆ ವಿನಾಯಿತಿ!