ರಾಹುಲ್ ಗಾಂಧಿ 
ದೇಶ

ಚುನಾವಣೆಗೂ ಮುನ್ನ ಪ್ರಧಾನಿ ಅಭ್ಯರ್ಥಿ ಘೋಷಣೆ ಪ್ರತಿಪಕ್ಷಗಳನ್ನು ಒಡೆಯಲಿದೆ: ಟಿಎಂಸಿ

ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್ ಅವರು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿ ಎಂದು ಪ್ರಸ್ತಾಪಿಸಿದ ಬೆನ್ನಲ್ಲೇ....

ಕೋಲ್ಕತಾ: ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್ ಅವರು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿ ಎಂದು ಪ್ರಸ್ತಾಪಿಸಿದ ಬೆನ್ನಲ್ಲೇ ಪ್ರತಿಪಕ್ಷಗಳಲ್ಲಿ ಅಪಸ್ವರ ಎದ್ದಿದ್ದು, ಚುನಾವಣೆಗೂ ಮುನ್ನ ಪ್ರಧಾನಿ ಅಭ್ಯರ್ಥಿ ಘೋಷಣೆ ಮಾಡುವುದರಿಂದ ಪ್ರತಿಪಕ್ಷಗಳಲ್ಲಿ ಒಡಕು ಮೂಡಲಿದೆ ಎಂದು ಟಿಎಂಸಿ ಸೋಮವಾರ ಹೇಳಿದೆ.
ಲೋಕಸಭೆ ಚುನಾವಣೆಯ ಫಲಿತಾಂಶದ ನಂತರ ಪ್ರಧಾನಿ ಯಾರಾಗಬೇಕು ಎಂಬುದನ್ನು ಪ್ರತಿಪಕ್ಷಗಳೊಂದಿಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಹೆಸರು ಹೇಳಲು ಇಚ್ಛಿಸಿದ ಟಿಎಂಸಿ ನಾಯಕರೊಬ್ಬರು ತಿಳಿಸಿದ್ದಾರೆ.
ಪ್ರಧಾನಿ ಅಭ್ಯರ್ಥಿ ಕುರಿತು ಏಕಪಕ್ಷೀಯ ಘೋಷಣೆಯಿಂದ ತಪ್ಪು ಸಂದೇಶ ರವಾನೆಯಾಗುತ್ತದೆ ಎಂದು ಟಿಎಂಸಿ ನಾಯಕ ಎಚ್ಚರಿಸಿದ್ದಾರೆ.
ಟಿಎಂಸಿ ಮಾತ್ರವಲ್ಲ, ಹಲವು ಪ್ರತಿಪಕ್ಷಗಳು ಸಹ ಚುನಾವಣೆಗೂ ಮುನ್ನ ಪ್ರಧಾನಿ ಅಭ್ಯರ್ಥಿ ಘೋಷಣೆಗೆ ವಿರೋಧ ವ್ಯಕ್ತಪಡಿಸಿದ್ದು, ಚುನಾವಣೆ ನಂತರವೇ ಪ್ರಧಾನಿ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು ಎಂದು ಹೇಳಿವೆ.
ನಿನ್ನೆ ಚೆನ್ನೈನಲ್ಲಿ ರಾಹುಲ್ ಗಾಂಧಿ ಪ್ರತಿಪಕ್ಷಗಳ ಪ್ರಧಾನಿ ಅಭ್ಯರ್ಥಿ ಎಂದಿದ್ದ ಸ್ಟಾಲಿನ್, ಫ್ಯಾಸಿಸ್ಟ್ ನರೇಂದ್ರ ಮೋದಿ ಸರ್ಕಾರವನ್ನು ಸೋಲಿಸುವ ಸಾಮರ್ಥ್ಯ ಗಾಂಧಿ ಕುಟುಂಬಕ್ಕೆ ಇದೆ ಎಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!