ಮುಂಬೈ: ವಾಣಿಜ್ಯ ರಾಜಧಾನಿ ಮುಂಬೈಯಲ್ಲಿ ಇಂದು ಸಂಜೆ ಭಾರೀ ಅಗ್ನಿ ಅವಘಡ ಸಂಭವಿಸಿದೆ.
ನಗರದ ಹೊರವಲಯ ಅಂದೇರಿಯ ಮಾರೊಲ್ ನಲ್ಲಿರುವ ರಾಜ್ಯ ನೌಕರರ ವಿಮಾ ನಿಗಮ- ಇಎಸ್ ಐಸಿ ಕಾಮ್ ಗರ್ ಆಸ್ಪತ್ರೆಯಲ್ಲಿ ಆಕಸ್ಮಿಕ ಬೆಂಕಿ ಉಂಟಾಗಿದ್ದು, 6 ಮಂದಿ ಮೃತಪಟ್ಟಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ.
ನಾಲ್ಕನೇ ಅಂತಸ್ತಿನಲ್ಲಿ ಕಾಣಿಸಿಕೊಂಡ ಬೆಂಕಿ ನಂತರ ಇತರ ಅಂತಸ್ತುಗಳಿಗೂ ವ್ಯಾಪಿಸಿದೆ ಎಂಬುದು ಮೂಲಗಳಿಂದ ತಿಳಿದುಬಂದಿದೆ.
ಧಗಧಗನೆ ಹೊತ್ತಿ ಉರಿಯುತ್ತಿದ್ದ ಬೆಂಕಿಯ ಜ್ವಾಲೆಯ ಮಧ್ಯೆ ಸಿಲುಕಿಕೊಂಡಿದ್ದ 100 ಮಂದಿಯನ್ನು ರಕ್ಷಿಸಲಾಗಿದೆ. ಇನ್ನೂ ಹಲವು ಮಂದಿ ಬೆಂಕಿ ಸಂಭವಿಸಿದ ಕಟ್ಟಡದೊಳಗೆ ಸಿಲುಕಿರುವ ಸಾಧ್ಯತೆ ಇದೆ .
ಸುದ್ದಿ ತಿಳಿದು 8 ವಾಹನಗಳಲ್ಲಿ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ರೋಗಿಗಳನ್ನು ಬೇರೆಡೆಗೆ ಸ್ಥಳಾಂತರಿಸಿ ಬೆಂಕಿ ನಂದಿಸಲು ಹರಸಾಹಸಪಟ್ಟರು ಎಂದು ವಿಪತ್ತು ನಿರ್ವಹಣಾ ಘಟಕ ತಿಳಿಸಿದೆ.
ಇಡೀ ಕಟ್ಟಡ ಹೊಗೆಯಿಂದ ಕೂಡಿದ್ದು, ಹಲವು ರೋಗಿಗಳು ಒಳಗಡೆಯೇ ಸಿಲುಕಿಕೊಂಡಿದ್ದಾರೆ. ಕೆಲವರು ಕಟ್ಟಡದ ಮೇಲ್ಛಾವಣಿಯ ಮೇಲೆ ಹೋಗಿ ಪ್ರಾಣ ಉಳಿಸಿಕೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಗ್ನಿ ಶಾಮಕ ಪಡೆಯ ಮುಖ್ಯ ಅಧಿಕಾರಿ ಪಿ. ರಹಂಗ್ ದಾಳೆ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics