ದೇಶ

ರಾಫೆಲ್ ವಿವಾದ: ರಾಹುಲ್ ಗಾಂಧಿ ವಿರುದ್ಧ ಹಕ್ಕುಚ್ಯುತಿ ಮಂಡಿಸಿದ ಬಿಜೆಪಿ

Lingaraj Badiger
ನವದೆಹಲಿ: ರಾಫೆಲ್ ಯುದ್ಧ ವಿಮಾನ ಖರೀದಿಗೆ ಸಂಬಂಧಿಸಿದಂತೆ ಆಧಾರ ರಹಿತಿ ಆರೋಪಗಳನ್ನು ಮಾಡಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ವಿರುದ್ಧ ಬಿಜೆಪಿ  ಸೋಮವಾರ ಲೋಕಸಭೆಯಲ್ಲಿ ಹಕ್ಯುಚ್ಯುತಿ ನಿರ್ಣಯ ಮಂಡಿಸಿದೆ.
ಬಿಜೆಪಿ ಸಂಸದ ಅನುರಾಗ್ ಥಾಕೂರ್ ಅವರು ಇಂದು ರಾಹುಲ್ ಗಾಂಧಿ ಅವರ ವಿರುದ್ಧ ಹಕ್ಕುಚ್ಯುತಿ ನಿರ್ಣಯ ಮಂಡಿಸಿರುವುದಾಗಿ ಎಎನ್ಐ ವರದಿ ಮಾಡಿದೆ.
ಇದಕ್ಕು ಮುನ್ನ ಕಾಂಗ್ರೆಸ್ ಉಭಯ ಸದನಗಳಳಲ್ಲಿ, ರಾಫೆಲ್ ಹಗರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಗೆ ತಪ್ಪು ಮಾಹಿತಿ ನೀಡಿದ ಬಗ್ಗೆ ಕೇಂದ್ರ ಸರ್ಕಾರ ವಿವರಣೆ ನೀಡಬೇಕು ಎಂದು ಹಕ್ಕುಚ್ಯುತಿ ನೋಟಿಸ್ ನೀಡಿತ್ತು.
ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರು ಸ್ಪೀಕರ್ ಸುಮಿತ್ರಾ ಮಹಾಜನ್ ಅವರಿಗೆ ನೋಟಿಸ್ ಸಲ್ಲಿಸಿದರೆ, ರಾಜ್ಯಸಭೆಯಲ್ಲಿ ಪ್ರತಿಪಕ್ಷದ ನಾಯಕ ಗುಲಾಂ ನಬಿ ಆಜಾದ್ ಅವರು ಅಧ್ಯಕ್ಷ ಎಂ.ವೆಂಕಯ್ಯ ನಾಯ್ಡು ಅವರಿಗೆ ನೋಟಿಸ್ ಸಲ್ಲಿಸಿದ್ದಾರೆ.
36 ರಾಫೆಲ್ ಯುದ್ಧ ವಿಮಾನ ಖರೀದಿ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಕಳೆದ ಶುಕ್ರವಾರ ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಆದರೆ ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ ತಪ್ಪು ಮಾಹಿತಿ ನೀಡಿದೆ ಎಂದು ಕಾಂಗ್ರೆಸ್ ಆರೋಪಿಸುತ್ತಿದೆ.
SCROLL FOR NEXT