ರಾಹುಲ್ ಈಶ್ವರ್ 
ದೇಶ

ಜಾಮೀನು ಷರತ್ತು ಉಲ್ಲಂಘನೆ: ರಾಹುಲ್ ಈಶ್ವರ್ ಬಂಧನ

ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದ ಅಯ್ಯಪ್ಪ ಧರ್ಮ ಸೇನಾ ಅಧ್ಯಕ್ಷ ರಾಹುಲ್ ಈಶ್ವರ್ ಅವರನ್ನು ಸೋಮವಾರ....

ಪಲಕ್ಕಾಡ್: ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದ ಅಯ್ಯಪ್ಪ ಧರ್ಮ ಸೇನಾ ಅಧ್ಯಕ್ಷ ರಾಹುಲ್ ಈಶ್ವರ್ ಅವರನ್ನು ಸೋಮವಾರ ಪಲಕ್ಕಾಡ್ ಪೊಲೀಸರು ಬಂಧಿಸಿದ್ದಾರೆ.
ಹಿಂದೂ ಮಹಾಸಭಾ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿಲು ಪಲಕ್ಕಾಡ್ ಆಗಿಮಿಸಿ, ಪಿಡಬ್ಲ್ಯುಡಿ ವಿಶ್ರಾಂತಿ ಗೃಹದಲ್ಲಿದ್ದ ರಾಹುಲ್ ಈಶ್ವರ್ ಅವರನ್ನು ಪೊಲೀಸ್ ಇಂದು ವಶಕ್ಕೆ ಪಡೆದಿದ್ದಾರೆ.
ಷರತ್ತು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಕಳೆದ ಶನಿವಾರ ರಣ್ಣಿ ಕೋರ್ಟ್ ರಾಹುಲ್ ಈಶ್ವರ್ ಅವರ ಜಾಮೀನನ್ನು ರದ್ದುಗೊಳಿಸಿ, ಆರೋಪಿಯನ್ನು ಬಂಧಿಸುವಂತೆ ಪೊಲೀಸರಿಗೆ ಆದೇಶಿಸಿತ್ತು.
ಸುಪ್ರೀಂ ಕೋರ್ಟ್ ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಅವಕಾಶ ನೀಡಿದ ನಂತರ ಅಕ್ಟೋಬರ್ 17ರಂದು ಮಹಿಳೆಯರ ಪ್ರವೇಶ ವಿರೋಧಿಸಿ ಪಂಪದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರಾಹುಲ್ ಈಶ್ವರ್ ಅವರನ್ನು ಪೊಲೀಸರು ಬಂಧಿಸಿದ್ದರು. ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.
ಜಾಮೀನು ಷರತ್ತುಗಳ ಪ್ರಕಾರ, ರಾಹುಲ್ ಈಶ್ವರ್ ಅವರು ಪ್ರತಿ ಶನಿವಾರ ಪೊಲೀಸ್ ಠಾಣೆಗೆ ಹಾಜರಾಗಬೇಕಿತ್ತು. ಆದರೆ ಪಂಪ ಪೊಲೀಸ್ ಠಾಣೆಗೆ ಹಾಜರಾಗದ ರಾಹುಲ್ ಈಶ್ವರ್ ಅವರ ಜಾಮೀನನ್ನು ಕೋರ್ಟ್ ರದ್ದುಗೊಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

ಇರಾನ್-ಅಮೆರಿಕ ಯುದ್ಧ ಮುಂದುವರೆದರೆ ಟ್ರಂಪ್ ಅಧ್ಯಕ್ಷ ಸ್ಥಾನಕ್ಕೇ ಕುತ್ತು!

40 ಲಕ್ಷ ರೂ ಸಂಬಳ, ದಿಢೀರ್ ಕೆಲಸದಿಂದ ವಜಾ; 1.4 ಕೋಟಿ ಮೌಲ್ಯದ ಮನೆ EMI ತೀರಿಸಲು Rapido ಚಾಲಕನಾದ ಟೆಕ್ಕಿ!

SCROLL FOR NEXT