ದೇಶ

ಬ್ಯಾಂಕ್ ಖಾತೆ, ಮೊಬೈಲ್ ಸಂಪರ್ಕಕ್ಕೆ ಇನ್ಮುಂದೆ ಆಧಾರ್ ಕಡ್ಡಾಯವಲ್ಲ!

Vishwanath S
ನವದೆಹಲಿ: ಆಧಾರ್ ಕಡ್ಡಾಯ ಕುರಿತಂತೆ ಇದ್ದ ನಾನಾ ಗೊಂದಲಗಳಿಗೆ ತೆರೆ ಎಳೆಯಲಾಗಿದ್ದು ಇನ್ಮುಂದೆ ಬ್ಯಾಂಕ್ ಖಾತೆಗಳು ಮತ್ತು ಮೊಬೈಲ್ ಸಂಪರ್ಕಗಳಿಗೆ ಆಧಾರ್ ಕಡ್ಡಾಯವಲ್ಲ. 
ಹೌದು, ಆಧಾರ್ ಕುರಿತಂತೆ ಈಗ ಇರುವ ಕಾನೂನಿಗೆ ತಿದ್ದುಪಡಿ ತರಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇದರೊಂದಿಗೆ ಇನ್ಮುಂದೆ ಬ್ಯಾಂಕ್ ಖಾತೆ ತೆರೆಯಲು ಹಾಗೂ ಮೊಬೈಲ್ ಸಂಪರ್ಕ ಪಡೆಯಲು ಆಧಾರ್ ಕೊಡುವ ಅಗತ್ಯವಿಲ್ಲದಂತಾಗಿದೆ. 
ಸೆಪ್ಟೆಂಬರ್ 26ರಂದು ಈ ಬಗ್ಗೆ ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್  ಆಧಾರ್ ನ ಸಾಂವಿಧಾನಿಕ ಮಾನ್ಯತೆಯನ್ನು ಎತ್ತಿಹಿಡಿದಿತ್ತು. ಮೊಬೈಲ್ ಸಂಪರ್ಕ ಹಾಗೂ ಬ್ಯಾಂಕ್ ಖಾತೆಗಳಿಗೆ ಆಧಾರ್ ಕಡ್ಡಾಯವಲ್ಲ ಎಂದು ಸುಪ್ರೀಂ ಕೋರ್ಟ್ ತಿಳಿಸಿತ್ತು.
SCROLL FOR NEXT