ಸಾಂದರ್ಭಿಕ ಚಿತ್ರ 
ದೇಶ

ಸಂವಹನ ಉಪಗ್ರಹ ಜಿಸ್ಯಾಟ್ -7ಎ ಉಡಾವಣೆಗೆ ಕ್ಷಣಗಣನೆ ಆರಂಭ

ದೇಶದ 35ನೇ ಸಂವಹನ ಉಪಗ್ರಹ ಉಡಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ ಸಂಜೆ 4.10ಕ್ಕೆ ಶ್ರೀಹರಿಕೋಟದ ಸತೀಶ್...

ನವದೆಹಲಿ: ದೇಶದ 35ನೇ ಸಂವಹನ ಉಪಗ್ರಹ ಉಡಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ ಸಂಜೆ 4.10ಕ್ಕೆ ಶ್ರೀಹರಿಕೋಟದ ಸತೀಶ್ ಧವನ್ ಬಾಹ್ಯಕಾಶ ಕೇಂದ್ರದಿಂದ ಜಿಸ್ಯಾಟ್ -7ಎ ಉಡಾವಣೆಯಾಗಲಿದೆ ಎಂದು ಮಂಗಳವಾರ ಭಾರತೀಯ ಬಾಹ್ಯಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ತಿಳಿಸಿದೆ.
ಇಸ್ರೋ ಅಭಿವೃದ್ಧಿಪಡಿಸಿದ 2,250 ಕೆ.ಜಿ ತೂಕದ ಈ ಉಪಗ್ರಹವನ್ನು ಜಿಎಸ್ ಎಲ್ ವಿ-ಎಫ್ 11 ರಾಕೆಟ್ ಮೂಲಕ ಭೂಸ್ಥಿರ ಕಕ್ಷೆಗೆ ಸೇರಿಸಲಾಗುವುದು ಎಂದು ಇಸ್ರೋ ಹೇಳಿದೆ.
ಈ ಉಪಗ್ರಹ ೮ ವರ್ಷಗಳ ಕಾಲ ಕಾರ್ಯನಿರ್ವಹಿಸಲಿದೆ, ಭಾರತೀಯ ಭೂ ಪ್ರದೇಶದಲ್ಲಿ ಗ್ರಾಹಕರಿಗೆ ಕ್ಯು-ಬ್ಯಾಂಡ್ ಸೇವೆಯನ್ನು ಕಲ್ಪಿಸುವಲ್ಲಿ ನೆರವಾಗಲಿದೆ ಎಂದು ಇಸ್ರೋ ತಿಳಿಸಿದೆ.
ಜಿಸ್ಯಾಟ್ -7ಎ ಉಪಗ್ರಹ,  ಕೆ-ಯು ಬ್ಯಾಂಡ್ ನಲ್ಲಿ ಸಂಪರ್ಕ ಒದಗಿಸಲಿದ್ದು, ಇದು ರೇಡಾರ್ ಸ್ಟೇಷನ್ಸ್ ಗಳ, ಏರ್ ಬೊರ್ನ್ ವಾರ್ನಿಂಗ್ ಅಂಡ್ ಕಂಟ್ರೋಲ್ ಏರ್ ಕ್ರಾಫ್ಟ್ ಮತ್ತು ವಾಯುನೆಲೆಗಳ ಮಧ್ಯೆ ಸುಧಾರಿತ ಸಂಪರ್ಕ ಜಾಲ ಒದಗಿಸಲು ಸೇನೆಗೆ ನೆರವಾಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!