ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಸದ್ಯಕ್ಕೆ ದೇಶದ ಏಕೈಕ ಮಹಿಳಾ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

2019ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಮಹತ್ವದ ಪಾತ್ರ ವಹಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಈಗ ದೇಶದ ...

ಮಮತಾ ಬ್ಯಾನರ್ಜಿ
Shilpa D
Updated On : 18 Dec 2018, 1:54 am
ನವದೆಹಲಿ: 2019ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಮಹತ್ವದ ಪಾತ್ರ ವಹಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಈಗ ದೇಶದ ಏಕೈಕ ಮಹಿಳಾ ಮುಖ್ಯಮಂತ್ರಿಯಾಗಿ ಉಳಿದಿದ್ದಾರೆ. 
ದೇಶದಲ್ಲಿ ಮೂವರು ಮಹಿಳಾ ಮುಖ್ಯಮಂತ್ರಿಗಳಿಂದ ಆರಂಭವಾದ ಈ ವರ್ಷ, ವಿವಿಧ ರಾಜ್ಯಗಳ ವಿಧಾನಸಭೆ ಚುನಾವಣೆಗಳ ಬಳಿಕ ಮಮತಾ ಬ್ಯಾನರ್ಜಿ ಒಬ್ಬರೇ ದೇಶದ ಏಕೈಕ ಮಹಿಳಾ ಮುಖ್ಯಮಂತ್ರಿಯಾಗಿ ಪಶ್ಚಿಮ ಬಂಗಾಳದಲ್ಲಿ ಮುಂದುವರೆದಿದ್ದಾರೆ.
ಇತ್ತೀಚೆಗೆ ನಡೆದ ರಾಜಸ್ತಾನ ವಿಧಾನಸಭೆ ಚುನಾವಣೆಯಲ್ಲಿ  ವಸುಂಧರಾ ರಾಜೆ ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ಬಿಜೆಪಿ ಬೆಂಬಲ ಹಿಂಪಡೆದ ಹಿನ್ನೆಲೆಯಲ್ಲಿ ಮೆಹಬೂಬಾ ಮುಫ್ತಿ ಅವರು ಜೂನ್ ತಿಂಗಳಿನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು. 

Advertisement

Advertisement

ಸದ್ಯ ಮಮತಾ ಬ್ಯಾನರ್ಜಿ ದೇಶದ ಎಲ್ಲ ಮಹಿಳೆಯರನ್ನೂ ಪ್ರತಿನಿಧಿಸುವ ದೇಶದ ಏಕೈಕ ಮಹಿಳಾ ಮುಖ್ಯಮಂತ್ರಿಯಾಗಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement