ಯೋಗಿ ಆದಿತ್ಯನಾಥ್ 
ದೇಶ

ಬುಲಂದ್ ಶಹರ್‌ ಹಿಂಸಾಚಾರ ರಾಜಕೀಯ ಪಿತೂರಿ: ಸಿಎಂ ಯೋಗಿ ಆದಿತ್ಯನಾಥ್

ಪೊಲೀಸ್ ಅಧಿಕಾರಿಯನ್ನು ಬಲಿ ಪಡೆದ ಬುಲಂದ್ ಶಹರ್‌ ಹಿಂಸಾಚಾರ ರಾಜಕೀಯ ನೆಲೆ ಕಳೆದುಕೊಂಡವರು ನಡೆಸಿದ ರಾಜಕೀಯ....

ಲಖನೌ: ಪೊಲೀಸ್ ಅಧಿಕಾರಿಯನ್ನು ಬಲಿ ಪಡೆದ ಬುಲಂದ್ ಶಹರ್‌ ಹಿಂಸಾಚಾರ ರಾಜಕೀಯ ನೆಲೆ ಕಳೆದುಕೊಂಡವರು ನಡೆಸಿದ ರಾಜಕೀಯ ಪಿತೂರಿ ಎಂದು 'ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಬುಧವಾರ ಹೇಳಿದ್ದಾರೆ.
ಪ್ರತಿಪಕ್ಷಗಳ ತೀವ್ರ ಗದ್ದಲದ ಹಿನ್ನೆಲೆಯಲ್ಲಿ ವಿಧಾನಸಭೆ ಕಲಾಪವನ್ನು ನಾಳೆಗೆ ಮುಂದೂಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯೋಗಿ, ಗೋ ಹತ್ಯೆ ವಿಫಲವಾದ ನಂತರ ಅರಾಜಕತೆಯನ್ನು ಸೃಷ್ಟಿಸಲು ಬಯಸುವವರು ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ, ರೈತರ ಸಮಸ್ಯೆ ತೀವ್ರವಾಗಿ ಬಿಗಡಾಯಿಸಿದೆ, ರಾಜ್ಯ ಸರಕಾರ ನಿಷ್ಕ್ರಿಯವಾಗಿದೆ ಎಂದು ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ಸದಸ್ಯರು ಘೋಷಣೆ ಕೂಗಿ ಗದ್ದಲ ಎಬ್ಬಿಸಿದರು.
ಪ್ರತಿಪಕ್ಷಗಳ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಯೋಗಿ, ರಾಜ್ಯ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುತ್ತಿದೆ. ಬುಲಂದ್ ಶಹರ್ ಪ್ರಕರಣ ರಾಜಕೀಯ ಪಿತೂರಿ ಎಂಬುದು ಸ್ಪಷ್ಟವಾಗಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ